ಪಂಚರಾಜ್ಯ ಚುನಾವಣೆಯ ಫಲಿತಾಂಶ ಹೊರಬಿದ್ದು, ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದ್ದರ ಬೆನ್ನಲ್ಲೇ, 2024 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಬೆಳಗಾವಿ ಅಧಿವೇಶನ ಮುಗಿದ ನಂತರ ಕರ್ನಾಟಕದಾದ್ಯಂತ ಪ್ರವಾಸ ಮಾಡಿ ಪ್ರಚಾರ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.
![](https://pratidhvani.com/wp-content/uploads/2023/09/BSYediyurappa-.jpg)
ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಗಳಲ್ಲಿ ಸನ್ನಿಹಿತವಾದ ವಿಜಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರನ್ನು ಯಡಿಯೂರಪ್ಪ ಅಭಿನಂದಿಸಿದ್ದಾರೆ.