ಸಿಎಂ ಸಿದ್ದರಾಮಯ್ಯ (Cm siddaramaiah) ವಿರುದ್ಧದ ಮೈಸೂರು ಮುಡಾ ಸೈಟ್ ಹಗರಣಕ್ಕೆ (Muda scam) ಸಂಬಂಧಪಟ್ಟಂತೆ ತನಿಖಾಧಿಕಾರಿಗಳು ಇಂದು ಮುಡಾ ಹಗರಣದ ತನಿಖಾ ವರದಿಯನ್ನು ಹೈಕೋರ್ಟ್ ಗೆ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.
ಈ ಬಗ್ಗೆ ಸಾಕಷ್ಟು ವಿಚಾರಣೆ ನಡೆಸಿರುವ ಮೈಸೂರು ಲೋಕಾಯುಕ್ತ (Mysuru lokayukta) ಅಧಿಕಾರಿಗಳು ವರದಿ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ಇಂದು ಹೈಕೋರ್ಟ್ ಗೆ ತನಿಖಾ ವರದಿಯನ್ನ ತನಿಖಾ ತಂಡ ಸಲ್ಲಿಕೆ ಮಾಡಲಿದೆ.

ಇದೇ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಯ ಮೇಲೆ ನಂಬಿಕೆಯಿಲ್ಲ. ಹೀಗಾಗಿ ಮುಡಾ ಹಗರಣ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ (Snehamayi krishna) ಹೈಕೋರ್ಟ್ ಮೊರೆ ಹೋಗಿದ್ದರು. ನಾಳೆ ಸಿಬಿಐ ತನಿಖೆಗೆ ಕೋರಿದ ಅರ್ಜಿಯ ವಿಚಾರಣೆ ನಡೆಯಲಿದೆ.
ಈ ಹಿಂದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ವಿಚಾರ ಕೋರ್ಟ್ ಮೆಟ್ಟಿಲೇರಿದ್ದಾಗ , ತನಿಖೆಗೆ ಅನುಮತಿ ನೀಡಿದ್ದ ನ್ಯಾಯಾಲಯ, ನ.೨೫ ಕ್ಕೆ ತನಿಖಾ ವರದಿ ಸಲ್ಲಿಕೆಗೆ ಹೈಕೋರ್ಟ್ ಸೂಚನೆ ನೀಡಿತ್ತು. ಹೈಕೋರ್ಟ್ ಸೂಚನೆ ಬೆನ್ನಲ್ಲೆ ಇಂದು ತನಿಖಾ ವರದಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.