ಲೋಕಾಯುಕ್ತ ನೇಮಕಾತಿಗೆ ಎಲ್ಲ ಪ್ರಕ್ರಿಯೆ ಮುಗಿದು ಕೊನೆ ಹಂತದಲ್ಲಿದೆ. ಆದಷ್ಟು ಬೇಗನೆ ಲೋಕಾಯುಕ್ತರು ನೇಮಕವಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ನೇಮಕಕ್ಕೆ ಹೈಕೋರ್ಟ್ ನೀಡಿರುವ ಸೂಚನೆಯಂತೆ ಕ್ರಮ ಕೈಗೊಳ್ಳಲಗಿದ ಆದಷ್ಟು ಬೇಗ ಲೋಕಾಯುಕ್ತರು ನೇಮಕವಾಗಲಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಇಂದ ಯಾರಿಗೂ ಆಫರ್ ಕೊಟ್ಟಿಲ್ಲ. ನಮಗೆ ಗೆಲ್ಲಬೇಕಾದಷ್ಟು ಮತಗಳು ನಮಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.