ಸರ್ಕಾರಿ ಅಧಿಕಾರಿಗಳಿಗೆ (Government Officers) ಬಿಸಿ ಮಟ್ಟಿಸುವ ನಿಟ್ಟಿನಲ್ಲಿ ಲೋಕಾಯುಕ್ತ ( Lokayuktha ) ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲವು ಕಡೆಗಳಲ್ಲಿ ಭ್ರಷ್ಟರಿಗೆ ಕಂಟಕ ಶುರುವಾಗಿದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಹಲವು ಅಧಿಕಾರಿಗಳ ಮನೆಗಳಲ್ಲಿ (house ) ಕೂಡ ಪರಿಶೀಲನೆಯನ್ನ ನಡೆಸಲಾಗುತ್ತಿದೆ.
ಇಂದು ಬೆಳಗ್ಗೆಯೇ (Morning ) ಹಲವು ಸರ್ಕಾರಿ ಅಧಿಕಾರಗಳ ಮನೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ( BBMP) ಮಹದೇವಪುರ ವಲಯದ ರೆವಿನ್ಯೂ ಇನ್ಸ್‌ಪೆಕ್ಟರ್ ನಟರಾಜ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಮುಖವಾಗಿ ನಟರಾಜ್‌ರ ಬನಶಂಕರಿ ನಿವಾಸ, ಹಾಗೂ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿನ ಶಿವನಹಳ್ಳಿ ಗ್ರಾಮದ ನಿವಾಸದಲ್ಲೂ ಕೂಡ ಪರಿಶೀಲನೆ ನಡೆಸಕಾಗುತ್ತಿದೆ, ಸದ್ಯ ನಟರಾಜ್ ಮಾತ್ರವಲ್ಲದೇ ಬೆಂಗಳೂರಿನ ಹಲವು ಕಡೆ ಹಲವು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ.
ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಾವಣಗೆರೆ ನಗರದ ಜಯನಗರದಲ್ಲಿರುವ ಮನೆ ಮೇಲೆ ಚಿತ್ರದುರ್ಗ ಲೊಕಾಯುಕ್ತ ಎಸ್ಪಿ ವಾಸುದೇವ್ ರಾಮ್ ಹಾಗೂ ಡಿವೈಎಸ್ಪಿ ಮೃಂತುಂಜಯ್ಯ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಕೌಲಪುರೆ ಅವರ ಆದೇಶದ ಮೇರೆಗೆ ದಾವಣಗೆರೆಯ ಇಬ್ಬರು ಇನ್ಸಪೆಕ್ಟರ್ ಸೇರಿದಂತೆ 6 ಜನರ ತಂಡ ದಾವಣಗೆರೆ ಜಿಲ್ಲೆ ಚನ್ನಗಿರಿ ವಲಯ ಸಂರಕ್ಷಣಾಧಿಕಾರಿಯಾಗಿರುವ ಸತೀಶ್ ಅವರಿಗೂ ಕೂಡ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದು, ಅವರ ಶಿವಮೊಗ್ಗದ ನಿವಾಸದ ಮೇಲೆಯೂ ದಾವಣಗೆರೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈಗಾಗಲೇ ಅಕ್ರಮ ಆಸ್ತಿ ವಿಚಾರದ ಆರೋಪ ಸತೀಶ್ ಅವರ ಮೇಲೆ ಕೇಳಿ ಬಂದಿರುವುದರಿಂದ ಅವರ ಶಿವಮೊಗ್ಗದ ಡಾಲರ್ಸ್ ಕಾಲೋನಿಯ ವೃಷಾಭಾದ್ರಿ ಮನೆಯ ಮೇಲೆ ಕೂಡ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಚನ್ನಗಿರಿ ಅರಣ್ಯ ಇಲಾಖೆಯ ವಸತಿ ಗೃಹ ಸೇರಿದಂತೆ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ
ಈ ಸುದ್ದಿಯನ್ನು ಓದಿದ್ದೀರಾ ? ; ಕಿಂಗ್ಫಿಶರ್ ಬಿಯರ್.. ಮನುಷ್ಯರು ಕುಡಿಯಲು ಯೋಗ್ಯವಲ್ಲ..!
ಸುಮಾರು 10ಕ್ಕೂ ಹೆಚ್ಚು ಮಂದಿಗೆ ಲೋಕಾಯುಕ್ತ ಪೊಲೀಸರು ತುಮಕೂರು ನಗರ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕರ ನಾಗರಾಜ ಮನೆ ಮೇಲೆ ದಾಳಿ ದಾಳಿ ನಡೆಸಿದ್ದಾರೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ನಾಗರಜ್‌ಗೆ ಸೇರಿದ ನಿವಾಸದ ಮೇಲೆ ಬೆಳಗ್ಗೆ ಸುಮಾರು ಐದು ಗಂಟೆ ವೇಳೆಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಕಾಗದಪತ್ರ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸ ಹಾಗೂ ಪಾವಗಡ ತಾಲೂಕು ಅರಸೀಕೆರೆಯ ನಿವಾಸ ಹಾಗೂ ಟೂಡಾ ಕಚೇರಿಯಲ್ಲಿ ಮೂರು ಪ್ರತ್ಯೇಕ ತಂಡಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಕಳೆದ 18 ತಿಂಗಳಿನಿಂದ TUDA ಕಚೇರಿಯಲ್ಲಿ ಅಕ್ರಮ ನಡೆದಿದೆ ಹಾಗೂ ಅದರ ಹಿಂದೆ ತುಮಕೂರು ನಗರ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕರ ನಾಗರಾಜ ಅವರ ಕೈವಾಡವಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಬಲವಾಗಿ ಕೇಳಿ ಬಂದ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಬೀದರ್ ಜಿಲ್ಲೆಯಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ವಿಜಯ್ಕುಮಾರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಈತನ ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿ ಹಾಗೂ ಹುಚಕನಳ್ಳಿ ಗ್ರಾಮದ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.
ಕೊಡಗು ಎಡಿಸಿ ನಂಜುಂಡೇಗೌಡ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇವರ ನಿವಾಸದ ಮೇಲೆ ಸಂಪೂರ್ಣವಾಗಿ ತಪಾಸಣೆ ನಡೆಸಲಾಗುತ್ತಿದೆ. ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಮನೆ ಮೇಲೆ ದಾಳಿ ನಡೆದಿದ್ದು ಪ್ರಸ್ತುತ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ, ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ ಪವನ್ ಕುಮಾರ್, ಇನ್ಸ್‌ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ. ಇನ್ನು ಈತನಿಗೆ ಸೇರಿದೆ ಎನ್ನಲಾಗುತ್ತಿರುವ ಪಿರಿಯಾಪಟ್ಟಣದ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಕೂಡ ಏಕಕಾಲದಲ್ಲಿ ದಾಳಿ ನಡೆಸಿ ತಪಸಾಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಕೊಪ್ಪಳದ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ್ ಬನ್ನಿಕೊಪ್ಪ ಕೆಲಸ ಮಾಡುವ ಕಚೇರಿ ಹಾಗೂ ಮನೆ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು ಐದು ತಂಡಗಳಲ್ಲಿ ದಾಳಿ ನಡೆಸಲಾಗಿದ್ದು, ಕೊಪ್ಪಳದ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಕಚೇರಿ ಮತ್ತು ಮಂಜುನಾಥ್ ಹೂಡಿಕೆ ಮಾಡಿರುವ ಕೊಪ್ಪಳ ತಾಲೂಕಿನ ಹುಲಿಗಿಯ ಮಾರ್ಕ್ ಇನ್ ಲಾಡ್ಜ್ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಒಟ್ಟಾರೆಯಾಗಿ ಇದೀಗ ರಾಜ್ಯ ನಾನ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ಹಲವು ಸರ್ಕಾರಿ ಅಧಿಕಾರಿಗಳಿಗೆ ನಡುಕ ಹುಟ್ಟಿರೋದಂತು ಸುಳ್ಳಲ್ಲ. ಇನ್ನು ಈ ದಾಳಿಯಿಂದ ಹಲವು ಭ್ರಷ್ಟ ಅಧಿಕಾರಿಗಳ ಮುಖವಾಡ ಕಳಚ ಬಹುದು ಎನ್ನಲಾಗುತ್ತಿದ್ದು, ಇನ್ನಷ್ಟು ಮಾಹಿತಿ ಲಭ್ಯವಾಗ ಬೇಕಿದೆ.