ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ 11 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ ನಡೆದಿದೆ.

ಬೆಂಗಳೂರರಿನ ಎಲೆಕ್ಟ್ರಾನಿಕ್ ಸಿಟಿ RTO ಕಚೇರಿ ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ CAO ಪುಟ್ಟಸ್ವಾಮಿ, ಬೀದರ್ ಮ ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್, ಮೈಸೂರಿನ ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್ ಪೆಕ್ಟರ್ ರಾಮಸ್ವಾಮಿ ಸಿ.,
ಧಾರವಾಡದ ಕರ್ನಾಟಕ ವಿ.ವಿ ಸಹಾಯಕ ಪ್ರಾಧ್ಯಾಪಕ ಸುಭಾಶ್ ಚಂದ್ರ, ಧಾರವಾಡದ ಪ್ರಾಥಮಿಕ ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್, ಶಿವಮೊಗ್ಗದ SIMS ಮೆಡಿಕಲ್ ಕಾಲೇಜ್ FDA ಲಕ್ಷ್ಮೀಪತಿ ಸಿ.ಎನ್, ದಾವಣಗೆರೆ- APMC ಸ. ನಿರ್ದೇಶಕ ಪ್ರಭು ಜೆ, ಮೈಸೂರಿನ (ಮಡಿಕೇರಿ) PWD, ಸ.ಅ.ಇಂಜಿನಿಯರ್ ಗಿರೀಶ್ ಡಿ.ಎಂ ಹಾಗೂ ಹಾವೇರಿಯ ಯೋಜನಾ ನಿರ್ದೇಶಕ ಕಚೇರಿ ಇಇ ಶೇಕಪ್ಪ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗ್ತಿದೆ.

ಇಂದು ಬೆಳಗ್ಗೆ 7 ಗಂಟೆಗೆ ಶುರುವಾಗಿರುವ ಪರಿಶೀಲನೆ ನಿರಂತರವಾಗಿ ನಡೆಯುತ್ತಿದ್ದು, ಅಕ್ರಮ ಹಣ ಸಂಪಾದನೆ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಸದ್ಯ ದಾಳಿ ವೇಳೆ ಅನೇಕರ ಮನೆಯಲ್ಲಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ಪತ್ತೆಯಾಗಿದೆ.












