
ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಲ್ಲಿ ಆದಾಯ ಮೀರಿದ ಆಸ್ತಿ ಸಂಪಾದಿಸಿದ ಆರೋಪದಡಿಯಲ್ಲಿ ಸಾರಿಗೆ ಇಲಾಖೆಯ ಮಾಜಿ ಕಾನ್ ಸ್ಟೆಬಲ್ ವೊಬ್ಬರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.

ಚಿನ್ನ ಮತ್ತು ಅಮೂಲ್ಯ ಲೋಹಗಳ ವಶ ದಾಳಿಯ ವೇಳೆ 40 ಕೆ.ಜಿ ಬೆಳ್ಳಿಯ ಗಟ್ಟಿ ಹಾಗೂ 200 ಮುಖಬೆಲೆ ನೋಟುಗಳ ಬಂಡಲ್ ಗಳು, 50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
#WATCH | Madhya Pradesh | 40 kg of silver and bundle of notes were recovered from the house of a former constable of the Transport Department during a Lokayukta Raid, yesterday, in Bhopal: Lokayukta
— ANI (@ANI) December 21, 2024
(Visual source: Lokayukta) pic.twitter.com/MTgKrBdfo5
ಇನ್ನೂ ಲೋಕಾಯುಕ್ತ ಪೊಲೀಸರು ಗುರುವಾರವೂ ಮಧ್ಯಪ್ರದೇಶ ಸಾರಿಗೆ ಇಲಾಖೆಯ ಕಾನ್ ಸ್ಟೆಬಲ್ ವೊಬ್ಬರ ಮನೆ ಮೇಲೆ ದಾಳಿ ನಡೆಸಿ 2.85 ಕೋಟಿ ನಗದು ಸೇರಿದಂತೆ 3 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದರು.
ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿಎಸ್ ಪಿ ತಿಳಿಸಿದ್ದಾರೆ.