ಯಾದಗಿರಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಹಿನ್ನೆಲೆ ಯಾದಗಿರಿ ಡಿಹೆಚ್ಒ ಡಾ.ಪ್ರಭುಲಿಂಗ್ ಮಾನಕರ್ ರನ್ನು ಅಮಾನತು ಮಾಡಲಾಗಿದೆ.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿ, ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಅಮಾನತು ಜೊತೆಗೆ ವರ್ಗಾವಣೆ ಮಾಡಲಾಗಿದೆ.
ಡಿಎಚ್ಒ ಯಿಂದ ನೇರವಾಗಿ ಕಲಬುರಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ದೂರು ಹಿನ್ನೆಲೆ ಕಳೆದ ಕೆಲ ತಿಂಗಳ ಹಿಂದೆ DHO ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಯಾದಗಿರಿಯ ಕಚೇರಿ, ಮನೆ, ಕಲಬುರಗಿ ಮನೆ ಮೇಲೆ ದಾಳಿ ಮಾಡಲಾಗಿತ್ತು.