• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

KRS Party: ಲೋಕಾಯುಕ್ತ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ಕೆ.ಆರ್.ಎಸ್‌ ಪಕ್ಷ..

ಪ್ರತಿಧ್ವನಿ by ಪ್ರತಿಧ್ವನಿ
June 24, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಆಡಳಿತದಲ್ಲಿನ ಅಕ್ರಮ, ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರವನ್ನು ನಿಯಂತ್ರಿಸಬೇಕಾದ ಲೋಕಾಯುಕ್ತ ಸಂಸ್ಥೆಯೆ ನಿರಂತರವಾಗಿ ಅಕ್ರಮಗಳಲ್ಲಿ ಮತ್ತು ಅವ್ಯವಹಾರಗಳಲ್ಲಿ ಸಿಲುಕುತ್ತಿರುವುದು ದುರದೃಷ್ಟಕರ. ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಬಹುತೇಕ ಪ್ರಕರಣಗಳು ತಾರ್ಕಿಕ ಅಂತ್ಯ ಕಾಣದೆ ಮುಕ್ತಾಯವಾಗುತ್ತಿವೆ ಮತ್ತು ಸ್ಪಷ್ಟವಾಗಿ ಭ್ರಷ್ಟಾಚಾರವೆಸಗಿರುವ ಪ್ರಕರಣಗಳು ಕೂಡ ವಿಲೇವಾರಿಯಾಗದೆ ದೂಳು ಹಿಡಿಯುತ್ತಿವೆ. ಇದು ಲೋಕಾಯುಕ್ತ ಸಂಸ್ಥೆಯೆ ಹಳ್ಳ ಹಿಡಿದಿರುವುದನ್ನು ತೋರಿಸುತ್ತದೆ.

ADVERTISEMENT

ಲೋಕಾಯುಕ್ತ ಸಂಸ್ಥೆಯ ಘನತೆಯನ್ನು ಮತ್ತು ವಿಶ್ವಾಸವನ್ನು ಎತ್ತಿ ಹಿಡಿಯಬೇಕಾದ ಹೊಣೆಗಾರಿಕೆ ಹಾಲಿ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್ ಅವರ ಮೇಲಿರುತ್ತದೆ, ಆದರೆ ಪ್ರಸ್ತುತ ಲೋಕಾಯುಕ್ತರು ಈ ಕಾರ್ಯದಲ್ಲಿ ಸಂಪೂರ್ಣವಾಗಿ ವಿಫಲರಾಗಿರುವುದು ಸ್ಪಷ್ಟವಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ವ್ಯಾಪಕವಾಗಿ ಅಕ್ರಮಗಳು ನಡೆಯುತ್ತಿದ್ದರೂ ಕೂಡ ಅದನ್ನು ನಿಯಂತ್ರಿಸುವಲ್ಲಿ ಅವರು ವಿಫಲರಾಗಿದ್ದಾರೆ. ಹಾಗೆಯೆ, ಅವರ ಕುಟುಂಬದವರು ಅವರ ಸ್ಥಾನವನ್ನು ದುರ್ಬಳಕೆ ಮಾಡಿರುವ ಬಗ್ಗೆ ಗಂಭೀರ ಆರೋಪವಿದ್ದು, ಆ ಬಗೆಗಿನ ಪ್ರಕರಣವು ನ್ಯಾಯಾಲಯದಲ್ಲಿದೆ. ಇಂತಹವರು ಲೋಕಾಯುಕ್ತರ ಸ್ಥಾನದಲ್ಲಿ ಮುಂದುವರೆಯುವುದು ಉಚಿತವಲ್ಲ. ಈ ಬಗ್ಗೆ ನೈತಿಕ ಹೊಣೆಗಾರಿಕೆ ಹೊತ್ತು ಲೋಕಾಯುಕ್ತರು ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸುತ್ತದೆ.


ಕರ್ನಾಟಕ ಲೋಕಾಯುಕ್ತವು ದೇಶಕ್ಕೆ ಮಾದರಿಯಾದಂತಹ ಸಂಸ್ಥೆಯಾಗಿತ್ತು, ಆದರೆ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಅದಕ್ಷತೆ, ಅಕ್ರಮಗಳಿಗೆ ಕುಖ್ಯಾತಿ ಪಡೆದು ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಲೋಕಾಯುಕ್ತ ಸಂಸ್ಥೆಯ ಅಕ್ರಮಗಳ ವಿರುದ್ದ ಮತ್ತು ಅದರ ಬಲವರ್ಧನೆಗಾಗಿ ಕೆ.ಆರ್.ಎಸ್. ಪಕ್ಷವು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದೆ. ಈ ವಿಚಾರಗಳ ಬಗ್ಗೆ ಧ್ವನಿ ಎತ್ತಬೇಕಾದ ವಿರೋಧ ಪಕ್ಷಗಳು ಗಾಢ ಮೌನವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ ಮತ್ತು ಬಲಿಷ್ಠ ಲೋಕಾಯುಕ್ತವು ಅವರಿಗೂ ಕೂಡ ಬೇಕಾಗಿದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಾಲು ಸಾಲು ಹಗರಣಗಳು ನಡೆಯುತ್ತಿದ್ದು, ನಿಯಂತ್ರಿಸಲು ಸರ್ಕಾರದ ವತಿಯಿಂದ ಯಾವುದೇ ಕ್ರಮವಾಗುತ್ತಿಲ್ಲ.

ಸಿದ್ದರಾಮಯ್ಯನವರ ಸರ್ಕಾರವು ಕೇವಲ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲದ ಕೊರತೆ ಕಾಡಲಿದ್ದು, ದಕ್ಷ ಆಡಳಿತ ಮತ್ತು ಭ್ರಷ್ಟಾಚಾರ ನಿಯಂತ್ರಣದ ಮೂಲಕ ಕಲ್ಯಾಣ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲ ಕ್ರೋಢೀಕರಿಸಬಹುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಹೇಳುತ್ತಾ ಬಂದಿದೆ. ಈ ಬಗ್ಗೆ ಗಮನ ನೀಡದೆ, ಈಗ ಸ್ವಪಕ್ಷೀಯರಿಂದಲೆ ಅಪಸ್ವರ ಕೇಳಿಬರುವಂತಾಗಿದೆ. ಸರ್ಕಾರದ ಬಹುತೇಕ ಮಂತ್ರಿಗಳೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎನ್ನುವುದಕ್ಕೆ ಕಾಂಗ್ರೆಸ್ ಪಕ್ಷದ ಶಾಸಕರುಗಳು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿರುವುದೆ ಸಾಕ್ಷಿಯಾಗಿದೆ. ಇನ್ನು ಲೋಕಾಯುಕ್ತ ಪೊಲೀಸರ ವಸೂಲಿಬಾಜಿಗೆ ಪ್ರಮುಖವಾಗಿ ಅಬಕಾರಿ ಇಲಾಖೆಯ ಬಹುತೇಕ ಅಧಿಕಾರಿಗಳು ಗುರಿಯಾಗಿದ್ದಾರೆ. ಇಂದು ಅಬಕಾರಿ ಇಲಾಖೆಯಲ್ಲಿ ಅಸಹ್ಯಕರ ಅವ್ಯವಹಾರ, ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವುದು ಸ್ಪಷ್ಟವಾಗಿದೆ.

ಇವನ್ನೆಲ್ಲ ನಿಯಂತ್ರಿಸಬೇಕಾದ ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಅವರು ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದರು ಎನ್ನುವುದು ಗಂಭೀರ ವಿಷಯವಾಗಿದೆ. ಆದ್ದರಿಂದ ಈ ಕೂಡಲೆ ಆರ್. ಬಿ. ತಿಮ್ಮಾಪುರ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರನ್ನು ತಮ್ಮ ಸಚಿವ ಸಂಪುಟದಿಂದ ವಜಾ ಮಾಡಬೇಕು. ಹಾಗೆಯೆ ಈ ಪ್ರಕರಣದ ತನಿಖೆಯಲ್ಲಿ ಹಲವು ಸಚಿವರು ಮತ್ತು ಅವರ ಆಪ್ತರು ಆರೋಪಿಗಳೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು, ಆ ಸಚಿವರುಗಳನ್ನು ಕೂಡ ತಮ್ಮ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಕೆ.ಆರ್.ಎಸ್. ಪಕ್ಷ ಆಗ್ರಹಿಸುತ್ತದೆ.


ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಅಕ್ರಮಗಳನ್ನು ಲೋಕಾಯುಕ್ತ ಪೊಲೀಸರೇ ತನಿಖೆ ಮಾಡುತ್ತಿದ್ದಾರೆ, ಆದರೆ ರಾಜ್ಯ ಪೊಲೀಸ್ ಇಲಾಖೆ ಹಾಗು ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಒಂದೇ ಮೂಲದವರಾಗಿದ್ದು, ಇವೆರಡೂ ಸಂಸ್ಥೆಗಳಿಂದ ತನಿಖೆ ಮಾಡುವುದು ಸ್ವಹಿತಾಸಕ್ತಿಯ ಸಂಘರ್ಷವಾಗುತ್ತದೆ ಮತ್ತು ತನಿಖೆ ಪಾರದರ್ಶಕವಾಗಿ ನಡೆಯುವ ಸಂಭವ ಬಹಳ ಕಡಿಮೆ ಇರುತ್ತದೆ. ಆದ್ದರಿಂದ ಸರ್ಕಾರವು ಈ ಕೂಡಲೇ, ಈ ಪ್ರಕರಣವನ್ನು ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐಗೆ ವಹಿಸಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸುತ್ತದೆ. ಈಗಾಗಲೇ, ಕೆ.ಆರ್.ಎಸ್. ಪಕ್ಷವು ನಿನ್ನೆ, (23-06-2025) ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದು, ವ್ಯಾಪಕ ಅಕ್ರಮ ಹಣ ವರ್ಗಾವಣೆ ನಡೆದಿರುವ ಈ ಪ್ರಕರದಲ್ಲಿ ದೂರು ದಾಖಲಿಸಿಕೊಂಡು ತನಿಖೆ ಮಾಡಬೇಕೆಂದು ಮನವಿ ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ವ್ಯಾಪಕ ಹೋರಾಟಗಳನ್ನು ಹಮ್ಮಿಕೊಳ್ಳಲಿದೆ.

ಪತ್ರಿಕಾ ಗೊಷ್ಠಿಯನ್ನು ಉದ್ದೇಶಿಸಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಮಾತನಾಡಿದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ. ಎನ್. ಮತ್ತು ಕಾರ್ಯದರ್ಶಿ ಎನ್. ನರಸಿಂಹಮೂರ್ತಿ ಉಪಸ್ಥಿತರಿದ್ದರು.

Tags: BJPcongressDK ShivakumarINC CongressKarnatakaKRSkrs partylokayuktharavikrishna reddysiddaramaiah
Previous Post

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತುರ್ತು ಸುದ್ದಿಗೋಷ್ಠಿ..!

Next Post

Shimla: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು.!!

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post

Shimla: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು.!!

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada