ಅಕ್ರಮ ಡಿನೋಟಿಫಿಕೇಷನ್ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ದೂರು ಸಲ್ಲಿಸಿದ್ದಾರೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಲಾಲ್ಬಾಗ್ ಸಿದ್ದಾಪುರ ಉದ್ಯಾನ ಹಾಗೂ ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ಜಾಗವನ್ನು ಖಾಸಗಿ ಬಿಲ್ಡರ್ ಒಬ್ಬರ ಅನುಕೂಲಕ್ಕಾಗಿ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ. ಇದರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಹಾಗೂ ಅಂದಿನ ಬಿಡಿಎ ಆಯುಕ್ತ ಶ್ಯಾಮ್ಭಟ್ ಶಾಮೀಲಾಗಿದ್ದಾರೆ. ಆದ್ದರಿಂದ ಸಮಗ್ರ ತನಿಖೆ ನಡೆಸಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.