ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಾಜ್ಯದ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ, ಹಾಸನ, ಕಲಬುರಗಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿಯಾಗಿದ್ದು, ಇದರ ಸಂಪೂರ್ಣ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನ ಕೆ.ಆರ್.ಪುರಂ ARO ಗೆ ಸೇರಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಹಿನ್ನೆಲೆ ದಾಳಿ ನಡೆದಿದೆ.
ಹಾಸನದ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ನಾರಾಯಣ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ್ದಾರೆ.
ರಾಯಚೂರಿನಲ್ಲಿ ಕೇಂದ್ರ ನಿರ್ಮಿತ ಅಧಿಕಾರಿಕಾಯಾಗಿರು ಶರಣಬಸವ ಪಟ್ಟೇದ್ ಅವರ ಗಂಗಾಪರಮೇಶ್ವರಿ ಕಾಲೋನಿಯಲ್ಲಿನ ಮನೆ ಸೇರಿ 4 ಕಡೆ ದಾಳಿಯಾಗಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಏಕಕಾಲಕ್ಕೆ ನಾಲ್ಕು ಕಡೆ ಮನೆ, ಕಚೇರಿ, ಸಂಬಂಧಿಕರ ಮನೆ ಮೇಲೂ ದಾಳಿ ನಡೆದಿದೆ. ಲಿಂಗಸುಗೂರಿನಲ್ಲಿನ ಜಮೀನು ಸೇರಿ ಆಸ್ತಿಗಳ ಪರೀಕ್ಷೆಯನ್ನು ಎಸ್ಪಿ ಡಾ. ರಾಮ್. ಎಲ್. ಅರಸಿದ್ದಿ ನೇತೃತ್ವದ ತಂಡ ನಡೆಸಿದೆ.
ಬಳ್ಳಾರಿ ಕಂದಾಯ ನಿರೀಕ್ಷಕ ಮಂಜುನಾಥ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್‌ಪಿ ಎಂ.ಎನ್. ಶಶಿಧರ್ ಮತ್ತು ಹೊಸಪೇಟೆ ಸಿಪಿಐ ಸುರೇಶ್ ಬಾಬು ನೇತೃತ್ವದಲ್ಲಿ ದಾಖಲೆ ಪರಿಶೀಲನೆ ಮುಂದುವರಿದಿದೆ.
ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಹಿನ್ನಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಇನ್ನು ಹಲವೆಡೆ ದಾಳಿ ಮಾಡಿದ್ದಾರೆ.