• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಾಲದ ಸುಳಿಯಲ್ಲಿ BMTC : 994 ಕೋಟಿ ರೂಪಾಯಿ ಸಾಲ ಕಟ್ಟಲಾಗದೆ BMTC ಕಂಗಾಲು!

Any Mind by Any Mind
April 27, 2022
in ಕರ್ನಾಟಕ
0
BMTC ಚಾಲಕ & ನಿರ್ವಾಹಕರ ಮೇಲೆ ಗದಾಪ್ರಹಾರ : ಕಲೆಕ್ಷನ್ ಟಾರ್ಗೆಟ್ ಕೊಟ್ಟು ಸಿಬ್ಬಂದಿಗಳಿಗೆ ಅಧಿಕಾರಿಗಳ ಕಿರುಕುಳ !
Share on WhatsAppShare on FacebookShare on Telegram

ADVERTISEMENT

ದೇಶದಲ್ಲೇ ನಂಬರ್ 1 ಸಾರಿಗೆ ಸಂಸ್ಥೆ ಅಂದರೆ ಅದು ಬಿಎಂಟಿಸಿ. ಆದರೆ ಈ ಬಿಎಂಟಿಸಿ ಈಗ ಕೋಟ್ಯಾಂತರ ರೂಪಾಯಿ ಸಾಲದಲ್ಲಿ ಸಿಲುಕಿದೆ. ಮೇಲಿಂದ ಮೇಲೆ ನಷ್ಟ ಹೊಂದುತ್ತಲೇ ಇದ್ದು ಲಾಭಕ್ಕೆ ಮರಳಿ ಬಾರದಷ್ಟು ಸಾಲದ ಹೊರೆ ಹೊತ್ತುಕೊಂಡಿದೆ. BMTC ಬೆಂಗಳೂರಿನ ಜನರ ಜೀವನಾಡಿ. ಒಂದು ದಿನ ಬೆಂಗಳೂರಿನಲ್ಲಿ ಬಸ್ ನಿಂತುಕೊಂಡರೆ ಬೆಂಗಳೂರಿನ ಜನಜೀವನವೇ ಅಸ್ತವ್ಯಸ್ತವಾಗುವಷ್ಟರ ಮಟ್ಟಿಗೆ ಬಹುಪಾಲು ಬೆಂಗಳೂರಿನ ಜನ BMTC ನೆಚ್ಚಿಕೊಂಡಿದ್ದಾರೆ. ಆದರೆ ಇಂತಹ ನಿಗಮವೇ ದಯನೀಯ ಪರಿಸ್ಥಿತಿಗೆ ಬಂದು ನಿಂತುಕೊಂಡಿದೆ. ಲಾಭದ ಹಳಿಗೆ ಬಾರದಷ್ಟು ದೂರಕ್ಕೆ ಹೋಗಿದ್ದು, ನಷ್ಟದಿಂದ ಪಾರಾಗಲು ನೂರಾರು ಕೋಟಿ ಸಾಲ ಪಡೆದು ಬಡ್ಡಿ ಕಟ್ಟೋಕೆ ಆಗದೆ ಹೆಣಗಾಡುತ್ತಿದೆ.

ಆಡಳಿತ ವೈಫಲ್ಯ ಹಾಗೂ ದುಂದುವೆಚ್ಚಕ್ಕೆ ನಿಯಂತ್ರಣ ಹಾಕಲು ಸಾಧ್ಯವಾಗದೇ ಇರುವುದರಿಂದ ನಿಗಮ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ. ಕಳೆದ ಹಲವು ವರ್ಷಗಳಿಂದ ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದರೂ ಅದನ್ನ ಮೇಲಕ್ಕೆತ್ತಲು ಸಾಧ್ಯವಾಗದ ಸ್ಥಿತಿಯಲ್ಲಿದೆ ಸರ್ಕಾರ. BMTCಯ ಇಂತಹ ದಯನೀಯ ಪರಿಸ್ಥಿತಿಗೆ ನಿಜವಾದ ಕಾರಣ ಯಾರು ಅನ್ನುವ ಪ್ರಶ್ನೆಗೆ ನಿಗಮದ ಅಧಿಕಾರಿಗಳು, ಸಾರಿಗೆ ಸಚಿವರೇ ಉತ್ತರ ನೀಡಬೇಕಿದೆ. BMTC ಇತಿಹಾಸದಲ್ಲೇ ಅತ್ಯಧಿಕ ಸಾಲ ಪಡೆದಿದ್ದು 2017 ರಿಂದ 2022 ಮಾರ್ಚ್ ವರಿಗೆ ಬರೋಬ್ಬರಿ 994 ಕೋಟಿ ಸಾಲ ಪಡೆದಿದೆ.

BMTC ಯಾವೆಲ್ಲಾ ವರ್ಷದಲ್ಲಿ ಎಷ್ಟೆಷ್ಟು ಸಾಲ ಮಾಡಿದೆ.!?

2017ರಲ್ಲಿ 100 ಕೋಟಿ ರೂಪಾಯಿ ಕೆನರಾ ಬ್ಯಾಂಕ್ ನಿಂದ ಸಾಲ, 2018ರಲ್ಲಿ 125 ಕೋಟಿ KUIDFC ಬ್ಯಾಂಕ್ ನಿಂದ ಸಾಲ, 2019ರಲ್ಲಿ 19.95 ಕೋಟಿ ಕೆನರಾ ಬ್ಯಾಂಕ್ ನಿಂದ ಸಾಲ, 2019-2020ರಲ್ಲಿ 160 ಕೋಟಿ ಸಾಲ, 2020-21ರಲ್ಲಿ 407 ಕೋಟಿ ಸಾಲ, 2022ರ ಮಾರ್ಚ್ನಲ್ಲಿ 183 ಕೋಟಿ KUIDFC ನಿಂದ ಸಾಲ ಪಡೆಯಲಾಗಿದ್ದು ಒಟ್ಟು 994 ಕೋಟಿ ರೂಪಾಯಿ ಸಾಲ ಮಾಡಿದೆ.

ಬಿಎಂಟಿಸಿ ಸಾಲದ ಸುಳಿಯಲ್ಲಿ ಸಿಲುಕಿರುವುದರ ಸಂಬಂಧ, ಬಿಎಂಟಿಸಿ ಉಪಾಧ್ಯಕ್ಷರನ್ನು ಕೇಳಿದರೆ, ಸಾಲ ಪಡೆಯುವುದು ಅನಿವಾರ್ಯವಾಗಿದೆ. ಟಿಕೆಟ್ ದರ ಸಹ ಹೆಚ್ಚಳ ಮಾಡಿಲ್ಲ. ಸಿಬ್ಬಂದಿಗಳ ವೇತನ, ಡಿಸೇಲ್ ಖರ್ಚು ಹೊಸ ಬಸ್ ನಿರ್ವಹಣೆ. ಹೀಗೆ ಅನಿವಾರ್ಯ ಕಾರಣಗಳಿಂದ ಸಾಲದ ಮೊರೆ ಹೋಗಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತ ವೈಫಲ್ಯ, ನಿಯಂತ್ರಣಕ್ಕೆ ಬಾರದ ಅಕ್ರಮಗಳಿಂದ ನಿಗಮ ದಿವಾಳಿಯಾಗಿದ್ದು 2013 ರಿಂದಲೂ ಆರ್ಥಿಕವಾಗಿ ಚೇತರಿಕೆ ಕಾಣ್ತಿಲ್ಲ. ಇದರಿಂದ ಪಾರಾಗಲು ಕೋಟಿ ಕೋಟಿ ಸಾಲ ಪಡೆದು ಮರುಪಾವತಿಸಲು ಹೆಣಗಾಡುತ್ತಿದೆ. ನಿಗಮ ಹೀಗೆ ಸಾಲ ಮಾಡಿದರೆ ಮುಂದೊಂದು ದಿನ BMTCಗೆ ಬೀಗ ಬಿದ್ದರೂ ಅಚ್ಚರಿ ಪಡಬೇಕಿಲ್ಲ.

Tags: BJPBMTCCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇಶದಲ್ಲಿ ಕರೋನಾ ಮತ್ತೆ ಹೆಚ್ಚಳ : ನಾವು ಭಯಪಡುವ ಅಗತ್ಯವಿದೆಯೇ? – ತಜ್ಞರು ಹೇಳೊದೇನು?

Next Post

ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಚಿತ್ರ ಬಿಜೆಪಿಯ ಪ್ರಪಗಾಂಡ : ತೆಲಂಗಾಣ ಸಚಿವ ಕೆಟಿಆರ್

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಚಿತ್ರ ಬಿಜೆಪಿಯ ಪ್ರಪಗಾಂಡ : ತೆಲಂಗಾಣ ಸಚಿವ ಕೆಟಿಆರ್

ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಚಿತ್ರ ಬಿಜೆಪಿಯ ಪ್ರಪಗಾಂಡ : ತೆಲಂಗಾಣ ಸಚಿವ ಕೆಟಿಆರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada