ಹುಬ್ಬಳ್ಳಿಯಲ್ಲಿ ನಿನ್ನೆ ಹತ್ಯೆಯಾಗಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅಂತ್ಯಸಂಸ್ಕಾರ ಇಂದು ನೆರವೇರಿಸಲಾಗಿದೆ. ವೀರಶೈವ ಜಂಗಮ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆದಿದೆ. ನೇಹಾ ಅಂತ್ಯಸಂಸ್ಕಾರ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನೇಹಾ ಹತ್ಯೆ ಮಾಡಿದ್ದ ಪಾಗಲ್ ಪ್ರೇಮಿ ಫಯಾಜ್ ವಿರುದ್ಧ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆದಿದೆ. ಕಾಲೇಜು ಆವರಣದಲ್ಲಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸ್ತು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ನೇಹಾ ಹತ್ಯೆ ಮಾಡಿರುವ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ರು

ಧಾರವಾಡದಲ್ಲಿ ಕರ್ನಾಟಕ ದಲಿತ ವಿಮೋಚನ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ರು. ಹಿಂದೂಪರ ಸಂಘಟನೆಗಳು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು. ಕೋರ್ಟ್ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆದು ಆಕ್ರೋಶ ಹೊರ ಹಾಕಿದ್ರು. ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ರು. ಅತ್ತ ಬಾಗಲಕೋಟೆಯಲ್ಲೂ ನೇಹಾ ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಬೆಂಗಳೂರಿನಲ್ಲಿ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ವು.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆಯಾಗುವಂತೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಸಂಜೆ ಬಳಿಕ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಎಬಿವಿಪಿ ಸಂಘಟನೆ ಬಿವಿಬಿ ಕಾಲೇಜು ಎದುರು ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದು, ನೇಹಾ ಭಾವಚಿತ್ರದ ಎದುರು ಕ್ಯಾಂಡಲ್ ಜೊತೆಗೆ ನಿಂತು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
