
ಬೆಂಗಳೂರು: ಹಾಡಹಗಲೇ ಯುವಕನ ಮೇಲೆ ಆಯಸಿಡ್ ದಾಳಿ (Acid Attack) ನಡೆಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ (Bengaluru) ಕಾಮಾಕ್ಷಿಪಾಳ್ಯ (Kamakshipalya) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ಉತ್ತರ ಭಾರತ ಮೂಲದ ಯುವಕನ ಮೇಲೆ ದುಷ್ಕರ್ಮಿಗಳು ಆಯಸಿಡ್ ಅಟ್ಯಾಕ್ ಮಾಡಿದ್ದಾರೆ. ಘಟನೆಯಲ್ಲಿ ಯುವಕ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಬಾಲಾಜಿ ವೈನ್ ಸ್ಟೋರ್ ಬಳಿ ಘಟನೆ ನಡೆದಿದೆ.ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 24 ವರ್ಷದ ಯವತಿ ಮೇಲೆ ಆಯಸಿಡ್ ಅಟ್ಯಾಕ್ ನಡೆದಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಭಗ್ನಪ್ರೇಮಿಯೇ ಈ ರೀತಿಯ ಪಾಪದ ಕೃತ್ಯ ಎಸಗಿದ್ದ. ಸುಂಕದ ಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ನಾಗೇಶ್ ಎಂಬಾತ ಆಯಸಿಡ್ ಎರಚಿದ್ದ