ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೈಯಂಟ್ಸ್ ಐಪಿಎಲ್ ಪಂದ್ಯಾವಳಿ ವೇಳೆ ಅನಿರ್ದಿಷ್ಟ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಲಖನೌ ತಂಡದ ನಾಯಕ ಕೆ.ಎಲ್.ರಾಹುಲ್ಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡವನ್ನು ವಿಧಿಸಲಾಗಿದೆ.
ಈ ಕುರಿತು ಪ್ರಕಟಣೆಯನ್ನು ಹೊರಡಿಸಿರುವ ಐಪಿಎಲ್ ರಾಹುಲ್ ನಿತಿ ಸಂಹಿತೆಯನ್ನು ಉಲ್ಲಂಘಿಸಿರುವುದಾಗಿ ಒಪ್ಪಿಕೊಂಡಿದ್ದಾರೆ ಮತ್ತು ದಂಡವನ್ನು ಕಟ್ಟುವುದಾಗಿ ಹೇಳಿದ್ದಾರೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ರಾಹುಲ್ ಜೊತೆಜೊತೆಗೆ ತಂಡದ ಸಹ ಆಟಗಾರನಾದ ಮಾರ್ಕಸ್ ಸ್ಟೋಯಿನಿಸ್ ಸಹ ವಾಗ್ದಂಡನೆಗೆ ಗುರಿಯಾಗಿದ್ದಾರೆ. ಅಂಪೈರ್ ಜೊತೆ ವಾಗ್ವಾದ ಮಾಡಿದ ಕಾರಣ ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.