ಲುಧಿಯಾನ ಕೋರ್ಟ್‌ನಲ್ಲಿ ಡಿಸೆಂಬರ್ 23, 2021ರಂದು ನಡೆದಿದ್ದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ದಳ(NIA) ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.
ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ಹರ್‌ಪ್ರೀತ್ ಸಿಂಗ್‌ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ANI ಟ್ವೀಟ್ ಮಾಡಿದೆ.
ಪಂಜಾಬ್‌ನ ಅಮೃತಸರ ಮೂಲದ ಹರ್‌ಪ್ರೀತ್ ಸಿಂಗಗಗ ಅಲಿಯಾಸ್ ಹ್ಯಾಪಿ ಮಲೇಷ್ಯಾನನ್ನು ಮಲೇಷ್ಯಾದ ಕೌಲಲಾಂಪುರದಿಂದ ದೆಹಲಿಗೆ ಬಂದಿಳಿದ ಸಂದರ್ಭದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯು ಶಸ್ತ್ರಾಸ್ತ್ರ, ಸ್ಪೋಟಕ ಮತ್ತು , ಮಾದಕ ವಸ್ತುಗಳ ಕಳ್ಳ ಸಾಗಾಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದನ್ನು. ಬಾಂಬ್ ಸ್ಪೋಟದ ನಂತರ ಆರೋಪಿಯನ್ನು ಹುಡುಕಿಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನವನ್ನ NIA ಘೊಷಿಸಿತ್ತು NBW( ಜಾಮೀನು ರಹಿತ ಬಂಧನ ಆದೇಶ) ಹೊರಡಿಸಿತ್ತು.