ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ (Parls Cini Creation) ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು (Comedy Kiladigalu)” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ಮೌನ ಗುಡ್ಡಮನೆ, ಶರತ್ ಲೋಹಿತಾಶ್ವ, ಕರಿ ಸುಬ್ಬು, ಡ್ರ್ಯಾಗನ್ ಮಂಜು, ಸೀನ ಮುಂತಾದವರು ಸಾಹಸ ಸನ್ನಿವೇಶದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಬಿಡುವಿನ ವೇಳೆ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾಹಿತಿ ನೀಡಿದರು.
ಹೆಸರೆ ಹೇಳುವಂತೆ ‘ಕುಲದಲ್ಲಿ ಕೀಳ್ಯಾವುದೊ’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತಾನಾಡಿದ ನಿರ್ದೇಶಕ ರಾಮನಾರಾಯಣ್, ಹಿರಿಯ ನಿರ್ದೇಶಕ ಯೋಗರಾಜ್ ಭಟ್ ಅವರ ಮಾರ್ಗದರ್ಶನದಲ್ಲಿ ಸಂತೋಷ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರದ ಸಾಹಸ ಸನ್ನಿವೇಶದ ಚಿತ್ರೀಕರಣ ವಿನೋದ್ ಮಾಸ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ. ಮಡೆನೂರ್ ಮನು, ಶರತ್ ಲೋಹಿತಾಶ್ವ, ಡ್ರ್ಯಾಗನ್ ಮಂಜು, ಕರಿಸುಬ್ಬು, ಮೌನ ಗುಡ್ಡೆಮನೆ, ಸ್ಥಳೀಯ ಪ್ರತಿಭೆ ಸೀನ ಮುಂತಾದವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸೋನಾಲ್ ಮೊಂತೆರೊ ಅವರು ಚಿತ್ರದ ವಿಶೇಷಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣವಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬರುತ್ತಿದೆ ಎಂದರು.
ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಯೋಗರಾಜ್ ಭಟ್ (Yogaraj Bhat) ನಮ್ಮ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಮಡೆನೂರ್ ಮನು (Madenur Manu) ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಅಂದುಕೊಂಡ ಆದರೆ ಫೆಬ್ರವರಿಯಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ಸಂತೋಷ್ (Producer Santhosh). ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ.
ಯೋಗರಾಜ್ ಭಟ್ ಅವರ ಮಾರ್ಗದರ್ಶನದಲ್ಲಿ, ಸಂತೋಷ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ , ರಾಮನಾರಾಯಣ್ ಅವರು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ನಟಿಸಲು ತುಂಬಾ ಸಂತೋಷವಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ. ಶರತ್ ಲೋಹಿತಾಶ್ವ, (Sharath Lohitashva) ತಬಲ ನಾಣಿ (Tabala Nani) ಮುಂತಾದ ಹಿರಿಯ ಕಲಾವಿದರ ಜೊತೆ ನಟಿಸಿ ಸಾಕಷ್ಟು ಕಲಿತೆದ್ದೇನೆ ಎಂದು ಮಡೆನೂರ್ ಮನು ತಿಳಿಸಿದರು .
ಹಿರಿತೆರೆಯಲ್ಲಿ ಇದು ನನ್ನ ಮೊದಲ ಚಿತ್ರ. ಈ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ ಎಂದು ಮೌನ ಗುಡ್ಡಮನೆ ಹೇಳಿದರು.
ಶರತ್ ಲೋಹಿತಾಶ್ವ, ಕರಿಸುಬ್ಬು, ಡ್ರ್ಯಾಗನ್ ಮಂಜು, ಸೀನ, ಸಾಹಸ ನಿರ್ದೇಶಕ ವಿನೋದ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಮನು ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ. ಮಡೆನೂರ್ ಮನು, ಮೌನ ಗುಡ್ಡೆಮನೆ, ಯೋಗರಾಜ್ ಭಟ್, ಹರೀಶ್ ರಾಜ್, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.