ಗ್ರಾಮ ಪಂಚಾಯಿತಿ ಸದಸ್ಯರನ್ನು ಬಿಜೆಪಿಯವರು ಬೀದಿಗೆ ತಂದು ನಿಲ್ಲಿಸಿದ್ದಾರೆ. ಹಾಗಾಗಿ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಗ್ರಾಮಪಂಚಾಯಿತಿಗಳ ಅಧಿಕಾರವನ್ನೇ ಮೊಟಕುಗೊಳಿಸಲಾಗಿದೆ. ಯಾವುದೇ ಸ್ವನಿರ್ಧಾರದ ಯೋಜನೆಗಳನ್ನು ಅವರು ಮಾಡುವಂತಿಲ್ಲ. ಅನುದಾನವನ್ನು ಕೂಡ ಹೆಚ್ಚು ಮಾಡಿಲ್ಲ. ಗ್ರಾಮಪಂಚಾಯಿತಿ ಸದಸ್ಯರ ವೇತನ ಕೂಡ ಹೆಚ್ಚು ಮಾಡಿಲ್ಲ. ಮೂಲಭೂತ ಸೌಕರ್ಯಗಳಿಗೆ ಒತ್ತು ಕೊಡುತ್ತಿಲ್ಲ. ಬಿಜೆಪಿ ಆಡಳಿತದಲ್ಲಿ ಗ್ರಾಮೀಣಾಭಿವೃದ್ಧಿಯೇ ಮರಿಚಿಕೆಯಾಗಿದೆ. ಸರ್ಕಾರದ ಯೋಜನೆಗಳು ಕೂಡ ತಲುಪದೆ ಹೋಗಿದೆ ಎಂದು ಆರೋಪಿಸಿದರು.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



