ಈ ಹಿಂದೆ ಬಿಜೆಪಿ ಪಕ್ಷದವರು ಏನೇನೋ ವಿಚಾರಗಳನ್ನು ಪಠ್ಯದೊಳಗೆ ಸೇರಿಸಿದ್ದರು. ಆ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಸ್ವಲ್ಪ ಪ್ರಮಾಣದ ಬದಲಾವಣೆ ಮಾಡಬೇಕಿದೆ. ಮಕ್ಕಳ ಅಗತ್ಯಕ್ಕೆ ಅನುಗುಣವಾಗಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲಾಗುತ್ತದೆ ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಹೇಳಿದ್ದಾರೆ.
ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ಎರಡು ದಿನಗಳ ಕಾಲ ನಡೆಯುವ ಮಕ್ಕಳ ದಸರಾ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾಧ್ಯಮದಗಳೊಂದಿಗೆ ಮಾತಾನಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದ್ದೆವು, ಹೇಳಿದಂತೆ ನಾವು ಮಾಡಿದ್ದೇವೆ. ಯಾವ ವಿಚಾರ ಇರಬೇಕು, ಯಾವ ವಿಚಾರ ತೆಗೆಯಬೇಕು ಎಂಬುದನ್ನು ನಾನು ಹೇಳುವುದಿಲ್ಲ. ಈ ವಿಚಾರದ ಬಗ್ಗೆ ನಾನು ಹೇಳಿದರೆ ವಿವಾದ ಆಗುತ್ತದೆ. ಅದಕ್ಕೆ ಅಂತಾನೆ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಇದೆ. ಸಮಿತಿಯವರು ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಸಚಿವ ಶಿವಾನಂದ ಪಾಟೀಲ್ ಅವರ ಫೋಟೋ ವೈರಲ್ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ತನಿಖಾಧಿಕಾರಿ ಅಲ್ಲ, ಎಲ್ಲಿ ಏನಾಗಿದೆ, ಯಾವ ಮೂಲದ ಹಣ ಎಂದೆಲ್ಲ ನನಗೆ ಗೊತ್ತಿಲ್ಲ. ಸಿನಿಮಾ ತಾರೆಯರು, ರಾಜಕಾರಣಿಗಳು ಎಲ್ಲರನ್ನೂ ಜನ ಗಮನಿಸುತ್ತಾರೆ. ಸಾರ್ವಜನಿಕ ಜೀವನದಲ್ಲಿ ಇರುವವರು ಎಚ್ಚರಿಕೆಯಿಂದ ಇರಬೇಕು. ಇಷ್ಟು ಮಾತ್ರ ನಾನು ಹೇಳಲು ಬಯಸುತ್ತೇನೆ ಎಂದರು.

ಜೆಡಿಎಸ್ ನಿಂದ ರಾಜ್ಯಾಧ್ಯಕ್ಷರ ಉಚ್ಛಾಟನೆ ವಿಚಾರದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬೇರೆಯವರ ಮನೆ ವಿಚಾರವನ್ನು ನಾನ್ಯಾಕೆ ಮಾತನಾಡಲಿ, ನಾನು ಕಾಂಗ್ರೆಸ್ ನಲ್ಲಿ ಇದ್ದೇನೆ, ನನ್ನ ಮನೆಯ ಬಗ್ಗೆ ಏನಾದರೂ ಇದ್ದರೆ ಕೇಳಿ. ಬೇರೆಯವರ ಮನೆಯ ವಿಚಾರಗಳನ್ನು ನಾನು ಮಾತನಾಡುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ವಿಚಾರದಲ್ಲಿ ಮತ್ತು ಕಾರ್ಯಾಧ್ಯಕ್ಷರ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಶಾಸಕರು ಟ್ರಿಪ್ಗೆ ಹೋಗಿರುವುದನ್ನೆಲ್ಲ ದೊಡ್ಡ ವಿಷಯ ಮಾಡೋದು ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.