ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಲಘು ಅಪಘಾತ ಸಂಭವಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದ್ದ ಲಘು ಕಾರು ಅಪಘಾತ ಎಂದು ತಿಳಿಯಲಾಗಿದೆ, ಚಲಿಸುತಿದ್ದ ರಾಜಸ್ಥಾನದ ಲಾರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಅವರ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.
ಸಚಿವರು ಸೇರಿ ಮೂವರು ಕಾರಿನಲ್ಲಿ ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಬದಲಿ ಕಾರು ವ್ಯವಸ್ಥೆ ಮಾಡಿಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಕ್ಯಾತಸಂದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ ಎಂದು ವರದಿಯಾಗಿದೆ