ರೈತರ ‘ಸಾಲದ ಬಗ್ಗೆ ಸಹಕಾರ ಸಚಿವ ಸೋಮಶೇಖರ್‌ಗೂ ಹೇಳಿದೆ. ಅವರು ಕ್ರಮ ಜರುಗಿಸ್ತಾ ಇಲ್ಲ.. ಏನು ಮಾಡೋದು? ಸರ್ಕಾರವನ್ನು ನಾವು ನಡೆಸುತ್ತಿಲ್ಲ. ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ತಮ್ಮ ಬಗ್ಗೆ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಆಡಿದ್ದಾರೆ ಎನ್ನಲಾದ ಮಾತಿನ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು, ‘ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದು ತಿಳಿದಿದ್ದಾರೆ ಎಂದು ತೀಕ್ಷ್ಣವಾಗಿ ಕಿಡಿಕಾದ್ದಾರೆ.
ಭಾನುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ಬಹುಶಃ ಮಾಧುಸ್ವಾಮಿ ಅವರ ಸಣ್ಣ ನೀರಾವರಿ ಇಲಾಖೆ ಕುಂಟುತ್ತಿರಬೇಕಷ್ಟೇ. ಸರ್ಕಾರ ಉತ್ತಮವಾಗಿಯೇ ಆಡಳಿತ ನಡೆಸುತ್ತಿದೆ. ಇದನ್ನು ಯಾರೂ ಬೊಟ್ಟು ಮಾಡಿ ತೋರಿಸಬೇಕಿಲ್ಲ. ‘ತಾನೊಬ್ಬನೇ ಬುದ್ಧಿವಂತ, ಮೇಧಾವಿ ಎಂದು ಮಾಧುಸ್ವಾಮಿ ಅವರು ತಿಳಿದಂತಿದೆ. ಸಂಪುಟದಲ್ಲಿ ಅನೇಕ ಅನುಭವಿಗಳು ಮತ್ತು ಹಿರಿಯ ಸಚಿವರಿದ್ದಾರೆ. ಮೊದಲು ಅಂತಹ ಮನೋಭಾವದಿಂದ ಅವರು ಹೊರಬರಬೇಕು’ ಎಂದು ಹರಿಹಾಯ್ದರು.

ಸಚಿವ ಮಾಧುಸ್ವಾಮಿ ಆಡಿಯೋ ಅನ್ನಲಾದ ಅದರಲ್ಲಿ, ‘ಸಾಲದ ಬಗ್ಗೆ ಸಹಕಾರ ಸಚಿವ ಸೋಮಶೇಖರ್‌ಗೂ ಹೇಳಿದೆ. ಅವೇನೂ ಕ್ರಮ ಜರುಗಿಸ್ತಾ ಇಲ್ಲ.. ಏನು ಮಾಡೋದು? ಸರ್ಕಾರವನ್ನು ನಾವು ನಡೆಸುತ್ತಿಲ್ಲ. ಮ್ಯಾನೇಜ್ ಮಾಡುತ್ತಿದ್ದೇವೆ. ಇನ್ನೆಂಟು ತಿಂಗಳು ತಳ್ಳಿದರೆ ಸಾಕು ಎಂದು ತಳ್ಳುತ್ತಿದ್ದೇವೆ’ ಎಂದು ಹೇಳಿದ್ದು ಕೇಳಿಬರುತ್ತದೆ.






