ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು(Mass Cheating) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಘಟನೆ ಸಿಸಿಟಿವಿಯಲ್ಲಿ ಬಯಲಾಗಿದೆ. ಜುಲೈ 5 ರಂದು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಎಸ್ ಡಿಎಂ ವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಅವರು ತನಿಖೆಗಾಗಿ ಸ್ಥಳಕ್ಕೆ ಬಂದರು ಆದರೆ ಅಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ವಿಷಯ ಬೆಳಕಿಗೆ ಬಂದಿದೆ.
ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ಅಲ್ಲಿ ನಡೆಯುತ್ತಿತ್ತು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ.
ಪರೀಕ್ಷಾ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಕೋಲಾಹಲವಿದೆ, ಈ ನಡುವೆ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತರಗತಿ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗ ಹಲವು ಮಕ್ಕಳು ಗುಂಪು ಕಟ್ಟಿಕೊಂಡು ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಅಲ್ಲಿ ಶಿಕ್ಷಕರೂ ಇದ್ದರು. ಆದರೆ ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.