ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಪಕ್ಷದ ಶಾಸಕರನ್ನು “ಖರೀದಿ” ಮಾಡಿ ಮಧ್ಯಪ್ರದೇಶದಲ್ಲಿ ಸರ್ಕಾರವನ್ನು “ಕದಿದ್ದಾರೆ” ಎಂದು ಕಾಂಗ್ರೆಸ್ ಹಿರಿಯ ಸಂಸದ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. 2020 ರಲ್ಲಿ ಕಮಲ್ ನಾಥ್ ಸರ್ಕಾರದ ಪತನಕ್ಕೆ ಕಾರಣವಾದ 22 ಶಾಸಕರ ಬಂಡಾಯವನ್ನು ಉಲ್ಲೇಖಿಸಿದ ಗಾಂಧಿ, ಜನಸಾಮಾನ್ಯರ ಧ್ವನಿಯನ್ನು ಬಿಜೆಪಿ “ಅಡಗಿಸಿದೆ” ಎಂದು ಪ್ರತಿಪಾದಿಸಿದರು.
2018 ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 114 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿ, 109 ಸ್ಥಾನಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತ್ತು. ಪಕ್ಷೇತರರ ಬೆಂಬಲ ಪಡೆದು ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಆದರೆ, ಕಮಲ್ ನಾಥ್ ಮುಖ್ಯಮಂತ್ರಿಯಾದ 15 ತಿಂಗಳ ನಂತರ ಅನೇಕ ಶಾಸಕರ ರಾಜೀನಾಮೆಯಿಂದ ಸರ್ಕಾರ ಪತನವಾಯಿತು. ನಂತರ ಶಿವರಾಜ್ ಸಿಂಗ್ ಚೋಹಾನ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚಿಸಿತು.
ಐದು ವರ್ಷಗಳ ಹಿಂದೆ ನೀವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಸರ್ಕಾರ ರಚಿಸಲು ಆಯ್ಕೆ ಮಾಡಿದ್ದೀರಿ, ಆದರೆ ಬಿಜೆಪಿ ನಾಯಕರು — ನರೇಂದ್ರ ಮೋದಿ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅಮಿತ್ ಶಾ ಒಟ್ಟಾಗಿ ಬಮ್ಮ ಶಾಸಕರನ್ನು ಖರೀದಿಸಿ ಕಳ್ಳತನ ಮಾಡಿದರು. ಮಧ್ಯಪ್ರದೇಶದ ನಮ್ಮದೂ ಮಾತ್ರ ಚುನಾಯಿತ ಸರ್ಕಾರ” ಬಿಜೆಪಿಯವರದ್ದು ಕಳ್ಳತನದ ಸರ್ಕಾರ ಎಂದು ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ.
ಕೋಟ್ಯಂತರ ರೂಪಾಯಿ ನೀಡಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಖರೀದಿಸುವ ಮೂಲಕ, ಮತದಾರರಾದ ನಿಮ್ಮ ನಿರ್ಧಾರ, ನಿಮ್ಮ ಹೃದಯದ ಧ್ವನಿಯನ್ನು ಬಿಜೆಪಿ ನಾಯಕರು ಹಾಗೂ ಪ್ರಧಾನಿ ಹತ್ತಿಕ್ಕಿ, ನಿಮಗೆ ಮೋಸ ಮಾಡಲಾಗಿದೆ” ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.
ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಂತೆ ಬಿಜೆಪಿಯನ್ನು ಕಾಂಗ್ರೆಸ್ ಓಡಿಸುತ್ತದೆ ಎಂದು ಗಾಂಧಿ ಪ್ರತಿಜ್ಞೆ ಮಾಡಿದ್ದಾರೆ.
“ನಾವು ಬಿಜೆಪಿ ವಿರುದ್ಧ ಹೋರಾಡುತ್ತೇವೆ. ಕರ್ನಾಟಕದಲ್ಲಿ ನಾವು ಅವರನ್ನು ಓಡಿಸಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ನಾವು ಅವರನ್ನು ಓಡಿಸಿದ್ದೇವೆ. ಆದರೆ ದ್ವೇಷದಿಂದ ಅಲ್ಲ. ನಾವು ‘ನಫ್ರತ್ ಕಾ ಬಜಾರ್’ನಲ್ಲಿ ‘ಮೊಹಬ್ಬತ್ ಕಿ ದುಕಾನ್’ ತೆರೆದಿದ್ದೇವೆ. ನಾವು ಅಹಿಂಸೆಯ ಸೈನಿಕರು, ನಾವು ಹೊಡೆಯುವುದಿಲ್ಲ, ಆದರೆ ನಾವು ಅವರನ್ನು ಪ್ರೀತಿಯಿಂದ ಓಡಿಸಿದೆವು, ಅವರಿಗೆ ಇಲ್ಲಿ ಸ್ಥಾನವಿಲ್ಲ ಎಂದು ನಾವು ಅವರಿಗೆ ಹೇಳಿದ್ದೇವೆ ಎಂದು ಮಾತನಾಡಿದ್ದಾರೆ..