
ಮಡಿಕೇರಿ ; ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ : 16-08-2024 ರ ಮಧ್ಯ ರಾತ್ರಿಯಲ್ಲಿ ಅಪರಿಚಿತ ವ್ಯಕ್ತಿಗಳು ದೇವಸ್ಥಾನದ ಮುಖ್ಯ ದ್ವಾರದ ಬೀಗವನ್ನು ಮುರಿದು ದೇವಸ್ಥಾನದಲ್ಲಿ ಇದ್ದಂತಹ 2 ಬಂಡಾರದ ಹುಂಡಿಗಳನ್ನು ಒಡೆದು ಅಂದಾಜು ರೂ. 2,50,000/-ಗಳ ನಗದನ್ನು ಹಾಗೂ ದೇವಿಯ ಮೂರ್ತಿಗೆ ಅಳವಡಿಸಿದ್ದ ಸುಮಾರು ರೂ. 1,16,000/- ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳತನವಾಗಿರುವ ಕುರಿತು ಶ್ರೀ.ಸೋಮಯ್ಯ ಟಿ.ಪಿ ಮ್ಯಾನೇಜಿಂಗ್ ಟ್ರಸ್ಟಿ, ಕೋಟೆ ಮಾರಿಯಮ್ಮ ದೇವಾಲಯ, ಮಡಿಕೇರಿ ರವರಿಂದ ದೂರು ಸ್ವೀಕರಿಸಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 331(4), 305 ಬಿಎನ್‌ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು,

ಸದರಿ ಪ್ರಕರಣದ ಆರೋಪಿಗಳನ್ನು ದಿನಾಂಕ: 22-08-2024 ರಂದು ಕಾಂತೂರು-ಮೂರ್ನಾಡು ಗ್ರಾಮದ ತೆಕ್ಕಡ ಪ್ರಸನ್ನ ಅವರ ತೋಟದ ಲೈನು ಮನೆಯಲ್ಲಿ ವಾಸವಿರುವ ಅಲ್ತಾಬ್ ಆಲಿ, 27 ವರ್ಷ, ಮೂಲತಃ ಅಸ್ಸಾಂ ರಾಜ್ಯ ಮತ್ತು ಕೃತ್ಯ ನಡೆಸುವ ಉದ್ದೇಶದಿಂದ ಅಸ್ಸಾಂನಿಂದ ಬಂದಂತಹ ಮೀರ್ ಹುಸೇನ್ @ ನೂರ್ ಹುಸೇನ್, 36 ವರ್ಷ, ಆಸ್ಸಾಂ ರಾಜ್ಯ ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ,
ಕಳವು ಮಾಡಿದ್ದ 3 ಗ್ರಾಂ ಚಿನ್ನದ ಮಾಂಗಲ್ಯ, 111 ಗ್ರಾಂ ಬೆಳ್ಳಿಯ ಕಿರೀಟ, 59 ಗ್ರಾಂ ಬೆಳ್ಳಿಯ ದೃಷ್ಟಿ ಬೊಟ್ಟು ಆಭರಣಗಳನ್ನು & ರೂ. 95,501/- ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.
