ಹಾಸನ ಜಿಲ್ಲೆ ಗೋರೂರು ಡ್ಯಾಂ ನಿಂದ ತುಮಕೂರಿಗೆ ಹೇಮಾವತಿ ನೀರು ಬರುತ್ತದೆ. ಅದೇ ನೀರನ್ನು ರಾಮನಗರ ಜಿಲ್ಲೆ ಮಾಗಡಿಗೆ ತೆಗೆದುಕೊಂಡು ಹೋಗಲು ರಾಜ್ಯ ಸರ್ಕಾರ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಜಾರಿ ಮಾಡಿದೆ. ಈ ಯೋಜನೆ ವಿರೋಧಿಸಿ ಇಂದು ತುಮಕೂರು ಜಿಲ್ಲೆಯಾದ್ಯಂತ ಬಂದ್ ಮಾಡಲು ಕರೆ ನೀಡಲಾಗಿದೆ.

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿ ಹೋರಾಟ ಸಮಿತಿ ಬಂದ್‌ಗೆ ಕರೆ ನೀಡಿದೆ. ಬಂದ್‌ಗೆ ವಿವಿಧ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಠಾಧೀಶರು, ಹೋಟೆಲ್ ಅಸೋಸಿಯೇಷನ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.
ಇಂದು ಬೆಳಗ್ಗೆ 10 ಗಂಟೆಗೆ ತುಮಕೂರಿನ ಟೌನ್ಹಾಲ್ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆ ಕಂಪ್ಲೀಟ್ ಅಲರ್ಟ್ ಆಗಿದ್ದು, ಯಾವುದೇ ಅಹಿತರಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸದಂತೆ ಪೊಲೀಸರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.






