ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ರಾಜೀನಾಮೆಯಿಂದಾಗಿ ಮಹಾವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿದ್ದು, ಈಗ ಫಡ್ನವೀಸ್ ಮತ್ತು ಅಘಾಡಿ ಸರ್ಕಾರ ಬೀಳಲು ಕಾರಣರಾದ ಏಕನಾಥ್ ಶಿಂಧೆ ಸರ್ಕಾರ ರಚನೆಯಾಗಲಿದೆ.
ಫಡ್ನವಿಸ್ ಮತ್ತು ಏಕನಾಥ್ ಶಿಂಧೆ ಇಂದು ರಾಜ್ಯಪಾಲರಿಂದ ಅಧಿಕಾರ ಸ್ವೀಕರಿಸಲಿದ್ದು, ಇಂದು ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನಲಾಗ್ತಿದೆ.
ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾದರೆ ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನದ ಸ್ವೀಕರಿಸಲಿದ್ದಾರೆ ಎನ್ನಲಾಗಿದ್ದು, 15 ಬಂಡಾಯ ಶಾಸಕರಿಗು ಸಚಿವ ಸ್ಥಾನ ಒಲಿದು ಬರಲಿದೆ ಎಂದು ತಿಳಿದು ಬಂದಿದೆ. ಇನ್ನು ಈ ನೂತನ ಮೈತ್ರಿ ಸರ್ಕಾರದ ರಚನೆಗೆ 49 ಶಾಸಕರ ಬೆಂಬಲದ ಸಹಿ ಇರುವ ಪತ್ರವನ್ನ ರಾಜ್ಯಪಾಲರಿಗೆ ಹಸ್ತಾಂತರಿಸಿದ್ದಾರೆ.