ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಹಾಗು ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಸೋಮವಾರ ಮಹಾರಾಷ್ಟ್ರ ವಿಧಾನಸಬೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ.
ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನಂತರ ತಮ್ಮ ತವರು ಕ್ಷೇತ್ರವಾದ ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ದೇವೇಂದ್ರ ಫಡ್ನವೀಸ್ ವಿದರ್ಭ ಪ್ರದೇಶದ ಅಭಿವೃದ್ದಿಗಾಗಿ ತಾವು ಬದ್ದರಾಗಿರುವುದಾಗಿ ತಿಳಿಸಿದ್ದಾರೆ.
