ಸುಪ್ರೀಂ ಕೋರ್ಟ್ ನಾಳೆ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿದ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಈ ಕುರಿತು ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ಕಳೆದ ಎರಡೂವರೆ ವರ್ಷಗಳ ಕಾಲ ನನಗೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದಗಳು ಎಂಬುದಾಗಿ ಹೇಳಿದ್ದಾರೆ.
ಅಲ್ಲದೇ ನಾಳೆ ವಿಶ್ವಾಸಮತ ಯಾಚನೆಗೆ ಮುನ್ನವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಮುಂದುವರೆದು, ಔರಂಗಾಬಾದ್ ನಗರವನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡುವ ತನ್ನ ತಂದೆ ದಿವಂಗತ ಬಾಳ್ ಠಾಕ್ರೆ ಅವರ ಕನಸನ್ನು ಈಡೇರಿಸಿದ್ದೇನೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.