ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ಪತನವಾಗಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ಅಜಿತ್ ಪವಾರ್ ಸೇರಿದಂತೆ ಎಲ್ಲಾ 6 ಮಂದಿ ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳು ದೃಢಪಡಿಸಿವೆ.

ಮಂಬರುವ ಪುಣೆ ಸ್ಥಳೀಯ ಚುನಾವಣಾ ಸಭೆಗಾಗಿ ಅಜಿತ್ ಪವಾರ್ ಮತ್ತು ಆಪ್ತ ಸಹಾಯಕರು ಖಾಸಗಿ ಜೆಟ್ ನಲ್ಲಿ ಮುಂಬೈನಿಂದ ಬಾರಾಮತಿಗೆ ಹೊರಟಿದ್ದರು. ಆದರೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 8.45ಕ್ಕೆ ವಿಮಾನ ಇಳಿಯಲು ಪ್ರಯತ್ನಿಸುವಾಗ ನಿಲ್ದಾಣದ ಹಿಂದಿನ ಖಾಲಿ ಜಾಗದಲ್ಲಿ ವಿಮಾನ ಕಂಟ್ರೋಲ್ ತಪ್ಪಿ ನೆಲಕ್ಕೆ ಬಿದ್ದಿದೆ. ಇದರಿಂದ ವಿಮಾನದಲ್ಲಿ ಬೆಂಕಿ ಕಾಣಸಿಕೊಂಡು ಕ್ಷಣಾರ್ಧದಲ್ಲಿ ಪತನವಾಗಿದೆ.

ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳೀಯರ ಜೊತೆ ಸೇರಿ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅಜಿತ್ ಪವಾರ್ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.











