ಮಹಾರಾಷ್ಟ್ರದಲ್ಲಿ 50 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಪ್ರಸ್ತುತ ಪ್ರಕರಣಗಳಲ್ಲಿ, ಒಂಬತ್ತು JN.1 ಸೋಂಕು ಪ್ರಕರಣಗಳು ಕಂಡುಬಂದಿವೆ.
ರಾಜ್ಯದಲ್ಲಿ ಹೊಸ ಸೋಂಕುಗಳ ಸಂಖ್ಯೆಯನ್ನು 10 ಕ್ಕೆ ಹೆಚ್ಚಿಸಿದೆ. JN.1 ರೋಗಿಗಳಲ್ಲಿ ಐವರು ಥಾಣೆಯಿಂದ, ಇಬ್ಬರು ಪುಣೆಯಿಂದ ಮತ್ತು ಪುಣೆ ಜಿಲ್ಲೆ, ಅಕೋಲಾ ನಗರ ಮತ್ತು ಸಿಂಧುದುರ್ಗ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಮಹಾರಾಷ್ಟ್ರದ ಕೃಷಿ ಸಚಿವ ಧನಂಜಯ್ ಮುಂಡೆ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಆಗಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ತಿಳಿಸಿದ್ದಾರೆ.

“ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಲ್ಲಿ ಒಬ್ಬರಾದ ಧನಂಜಯ್ ಮುಂಡೆ ಅವರು ಕೋವಿಡ್-19 ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಮುನ್ನಚ್ಚರಿಕೆ ವಹಿಸಲಾಗಿದೆ. ಕೊರೊನಾ ಹರಡುವಿಕೆಯನ್ನು ಪರಿಶೀಲಿಸಲು ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ” ಎಂದು ಅವರು ಮಾಹಿತಿ ನೀಡಿದರು





