ರಾಜ್ಯಪಾಲರು ಗುರುವಾರ ಸೂಚಿಸಿರುವ ವಿಶ್ವಾಸಮತ ಯಾಚನೆಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಉದ್ಧವ್ ಠಾಕ್ರೆ ನೇತೃತ್ವದ ಸರಕಾರ ಸಂಕಷ್ಟಕ್ಕೆ ಸಿಲುಕಿದೆ.
ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಗುರುವಾರ ವಿಶ್ವಾಸಮತ ಸಾಬೀತುಪಡಿಸುವಂತೆ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರಕ್ಕೆ ಸೂಚಿಸಿದ್ದರು. ವಿಶ್ವಾಸಮತ ಸಾಬೀತಿಗೆ ಅತ್ಯಂತ ಕಡಿಮೆ ಅವಧಿ ನೀಡಿರುವುದನ್ನು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ಬುಧವಾರ ರಾತ್ರಿ 9 ಗಂಟೆಗೆ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್ ವಿಶ್ವಾಸಮತ ಸಾಬೀತಿಗೆ ತಡೆಯಾಜ್ಞೆ ನೀಡಲು ಅಸಾಧ್ಯ ಎಂದು ಹೇಳಿತು. ಈ ಮೂಲಕ ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟಿಗೆ ಶೀಘ್ರ ತೆರೆ ಬೀಳುವ ಸಾಧ್ಯತೆ ಇದೆ.