• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ನರೇಗಾ ಬಚಾವ್ ಆಂದೋಲನ ಜನಾಂದೋಲನವಾಗಬೇಕು: ಸಿ.ಎಂ ಕರೆ. MNREGA ಕಾಯ್ದೆ ಪುನ:ಸ್ಥಾಪಸಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
January 13, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು, ಜನವರಿ 13: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ADVERTISEMENT

ಅವರು ಇಂದು ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಸಂಗ್ರಾಮ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. MNREGA ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ MNREGA ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು.

ದೇಶದಲ್ಲಿ 12.16 ಕೋಟಿ ಕಾರ್ಮಿಕರಿಗೆ ಕೆಲಸ.
ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ MNREGA ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿದ್ದರು. ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು ಎಂದರು. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದರು.

ವಿಬಿಜಿ ರಾಮ್ ಜಿ ಮೂಲಕ ಮತ್ತೊಮ್ಮೆ ಗಾಂಧೀಜಿ ಕೊಲೆ.
ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮಾ ಗಾಂಧಿ ಕೊಂದ ನಾಥೂರಾಮ ಇದು. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ.ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು ಎಂದರು.

ನರೇಗಾ ಬಚಾವ್ ಆಂದೋಲನ ಜನಾಂದೋಲನವಾಗಬೇಕು.
ಈಗ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ. ಅಲ್ಲಿ ಕೆಲಸ ಮಾಡಬೇಕು. ಈಗ ರಾಜ್ಯಗಳು 40% ವೆಚ್ಚವನ್ನು ಭರಿಸಬೇಕಿದೆ. 2500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ನರೇಗಾ ಬಚಾವ್ ಆಂದೋಲನವನ್ನು ರೂಪಿಸಿದೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು ಎಂದರು.

Tags: AICCCM SiddaramaiahDK ShivakumarMahathma GandhiMNREGANaregaNatharam GodseSeetha RamVBG Ram
Previous Post

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

Next Post

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

Related Posts

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!
Top Story

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

by ಪ್ರತಿಧ್ವನಿ
March 4, 2026
0

ಜಿ.ಬಿ. ಪಾಟೀಲ್‌ : ಬರಹಗಾರರು.. ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ದಿನಕಳೆಂದತೆ ಹೆಚ್ಚಾಗುತ್ತಿದೆ. ಈಗಾಗಲೇ ಅಂದುಕೊಂಡಂತೆ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಹಾಗೂ ಇಸ್ರೇಲ್‌...

Read moreDetails
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada