ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ಇವೆ. ಹೀಗಾಗಿ ಇವರನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು.

ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಉತ್ತರ ಕರ್ನಾಟಕದ ಜಿಲ್ಲೆಯೊಂದಕ್ಕೆ ಒಂದು ವರ್ಷ ಅವಧಿಗೆ ಗಡಿಪಾರು ಮಾಡಿದ್ದೇವೆ ಎಂದು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
