ದೇಶದಲ್ಲಿ ಆರ್ಥಿಕ ದುಸ್ಥಿತಿ ಹಿನ್ನೆಲೆಯಲ್ಲಿ ಉಂಟಾಗುತ್ತಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಮಹೀಂದಾ ರಾಜಪಕ್ಸ ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದ ರಾಜಪಕ್ಸ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಆರೋಗ್ಯ ಸಚಿವ ಪ್ರೊಫೆಸರ್ ಚನ್ನಾ ಜಯ ಸುಮನ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಪಕ್ಸೆ ಸೋದರರಾದ ಅಧ್ಯಕ್ಷ ಗೊಟಬಯಾ ರಾಜಪಕ್ಸ ಕೂಡ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
1948ರಲ್ಲಿ ಸ್ವಾತಂತ್ರ್ಯ ಸಿಕ್ಕ ನಂತರ ಶ್ರೀಲಂಕಾ ಆರ್ಥಿಕ ಸುಳಿಯಲ್ಲಿ ಸಿಲುಕಿದೆ. ಒಂದೆಡೆ ಮಹಿಂದಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸ್ವಪಕ್ಷೀಯ ನಾಯಕರೆ ಸರ್ಕಾರದ ಮೇಲೆ ಒತ್ತಡ ಹೇರಿದ ಕಾರಣ ಮತ್ತು ರಾಷ್ಟ್ರವ್ಯಾಪಿ ಜನರು ಸರ್ಕಾರದ ವಿರುದ್ದ ತಿರುಗಿ ಬಿದ್ದ ಕಾರಣ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.