• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಾಲಾಶ್ರೀ ಅಭಿನಯದ “ಮಾರಕಾಸ್ತ್ರ” ಚಿತ್ರ “ಮಾರಣಾಯಧಂ” ಹೆಸರಿನಿಂದ ತೆಲುಗಿನಲ್ಲಿ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in ಸಿನಿಮಾ
0
ಮಾಲಾಶ್ರೀ ಅಭಿನಯದ “ಮಾರಕಾಸ್ತ್ರ” ಚಿತ್ರ “ಮಾರಣಾಯಧಂ” ಹೆಸರಿನಿಂದ ತೆಲುಗಿನಲ್ಲಿ ಬಿಡುಗಡೆ
Share on WhatsAppShare on FacebookShare on Telegram

ಕೋಮಲ ನಟರಾಜ್ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಹಾಗೂ ಮಾಲಾಶ್ರೀ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದ “ಮಾರಕಾಸ್ತ್ರ” ಚಿತ್ರ ಕಳೆದವರ್ಷ ಬಿಡುಗಡೆಯಾಗಿ ಕನ್ನಡಿಗರ ಮನ ಗೆದ್ದಿತ್ತು. ಈ ಚಿತ್ರ ಈಗ ತೆಲುಗಿನಲ್ಲೂ ನಿರ್ಮಾಣವಾಗಿದ್ದು “ಮಾರಣಾಯುಧಂ” ಎಂದು ಹೆಸರಿಡಲಾಗಿದೆ. ಆಂದ್ರ ಹಾಗು ತೆಲಂಗಾಣದಲ್ಲಿ ಈ ಚಿತ್ರ ಈಗಾಗಲೇ ಬಿಡುಗಡೆಯಾಗಿದ್ದು, ಅಲ್ಲಿನ ಜನರ ಮನ ಗೆದ್ದಿದೆ. ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಈ ಚಿತ್ರ ತೆಲುಗು ಹಾಗೂ ಕನ್ನಡದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.‌ ಈ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ನಮ್ಮ “ಮಾರಕಾಸ್ತ್ರ” ಚಿತ್ರವನ್ನು ಕಳೆದವರ್ಷ ಬಿಡುಗಡೆ ಮಾಡಿದ್ದೆವು. ಆ ಸಮಯದಲ್ಲಿ ಭಾರತ – ಪಾಕ್ ಮ್ಯಾಚ್, ಹಬ್ಬಗಳು ಬಂದವು. ಹಾಗಾಗಿ ಅಷ್ಟು ಜನ ನಮ್ಮ ಸಿನಿಮಾ‌ ನೋಡಲು ಆಗಲಿಲ್ಲ. ಆದರೆ ಚಿತ್ರ ನೋಡಿದ ತೆಲುಗು ವಿತರಕರಾದ ವೆಂಕಟೇಶ್ ರಾವ್ ಅವರು ಈ ಚಿತ್ರವನ್ನು ತೆಲುಗಿನಲ್ಲಿ ನಿರ್ಮಾಣ ಮಾಡಿ ಎಂದರು. “ಮಾರಕಾಸ್ತ್ರ” ಈಗ “ಮಾರಣಾಯುಧಂ” ಎಂಬ ಹೆಸರಿನಿಂದ ಇದೇ ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ. ಶನಿವಾರ( 27) ದಂದು ಪೌರ ಕಾರ್ಮಿಕರು ಸೇರಿದಂತೆ ಅನೇಕ ಶ್ರಮಿಕ ವರ್ಗದವರಿಗೆ ಒಂದು ಉಚಿತ ಪ್ರದರ್ಶನದ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು ನಿರ್ಮಾಪಕ ನಟರಾಜ್.

“ಮಾರಕಾಸ್ತ್ರ” ಚಿತ್ರವನ್ನು ಬಿಡುಗಡೆ ಮಾಡಿದಾಗ ಚಿತ್ರದ ಅವಧಿ ಸ್ವಲ್ಪ ಹೆಚ್ಚಿದೆ ಎಂದಿದ್ದರು ಈಗ 26 ನಿಮಿಷ ಕಡಿಮೆ ಮಾಡಿದ್ದೇವೆ. ಮಾಲಾಶ್ರೀ, ಆನಂದ್ ಆರ್ಯ, ಹರ್ಷಿಕಾ ಪೂಣಚ್ಛ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ ಎಂದು ನಿರ್ದೇಶಕ ಗುರುಮೂರ್ತಿ ಸುನಾಮಿ ತಿಳಿಸಿದರು.

ನಾನು ಮೊದಲು “ಮಾರಕಾಸ್ತ್ರ” ಚಿತ್ರದಲ್ಲಿ ನಟಿಸಲು ಒಪ್ಪಿರಲಿಲ್ಲ. ಆನಂತರ ನಿರ್ದೇಶಕರು ಕಥೆ ಹೇಳಿದ ರೀತಿ ಇಷ್ಟವಾಯಿತು. ಅದರಲ್ಲೂ ನಿರ್ದೇಶಕರಿಗೆ ಕಾಲಿನ ಸಮಸ್ಯೆಯಿದೆ. ಅಂತಹುದರಲ್ಲೂ ಅವರಿಗಿರುವ ಸಿನಿಮಾ ಪ್ರೀತಿ ಕಂಡು ಖುಷಿಯಾಯಿತು. ತೆಲುಗಿನ ಜನರು ನನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಇದೇ ಶುಕ್ರವಾರ ಕರ್ನಾಟಕದಲ್ಲೂ ಬಿಡುಗಡೆಯಾಗಲಿದೆ. ಎಲ್ಲರೂ ಚಿತ್ರ ನೋಡಿ ಎಂದರು ನಟಿ ಮಾಲಾಶ್ರೀ.

ಚಿತ್ರದ ವಿತರಕ ಯಾದವ್, ಕಾರ್ಯಕಾರಿ ನಿರ್ಮಾಪಕ ವೆಂಕಟೇಶ್ ರಾವ್, ನಾಯಕ ಆನಂದ್ ಆರ್ಯ, ರವಿಚೇತನ್ , ಶಶಿಧರ್, ಮಂಜುನಾಥ್, ಮಂಜುಳಾ ರೆಡ್ಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: malashreeMarakastraMaranayadhamMoviesandalwood
Previous Post

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

Next Post

ಗುಜರಾತ್ ವಿರುದ್ಧ ಅರ್ಧಶತಕ; ಮೂಡಿದ್ದು ಹೊಸ ದಾಖಲೆ!

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ಗುಜರಾತ್ ವಿರುದ್ಧ ಅರ್ಧಶತಕ; ಮೂಡಿದ್ದು ಹೊಸ ದಾಖಲೆ!

ಗುಜರಾತ್ ವಿರುದ್ಧ ಅರ್ಧಶತಕ; ಮೂಡಿದ್ದು ಹೊಸ ದಾಖಲೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada