
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ( rape case) ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಕೇರಳ ಹೈಕೋರ್ಟ್ (High Court)ಆದೇಶದ ವಿರುದ್ಧ ಮಲಯಾಳಂ ಚಲನಚಿತ್ರ ನಟ ಸಿದ್ದಿಕ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ನ o(Supreme Court)ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ಮಾಹಿತಿಯ ಪ್ರಕಾರ, (Siddique)ಸಿದ್ದಿಕ್ ನ್ಯಾಯಾಲಯಕ್ಕೆ ಅರ್ಜಿ (Application to court)ಸಲ್ಲಿಸಿದ್ದಾರೆ.

ಮಂಗಳವಾರ, ಕೇರಳ ಹೈಕೋರ್ಟ್ ತನ್ನ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಿದ್ಧಿಕ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅವರು ಎದುರಿಸುತ್ತಿರುವ ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಅಪರಾಧದ ಸರಿಯಾದ ತನಿಖೆಗಾಗಿ ಅವರ ಕಸ್ಟಡಿ ವಿಚಾರಣೆ ಅನಿವಾರ್ಯವಾಗಿದೆ ಎಂದು ಹೈಕೋರ್ಟ್ ಹೇಳಿತ್ತು. ಪ್ರಾಥಮಿಕ ಹಂತದ ದಾಖಲೆಗಳ ಪ್ರಕಾರ ಸಿದ್ದಿಕ್ ಅಪರಾಧದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ಗಮನಿಸಿತ್ತು. ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (AMMA) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಿದ್ದಿಕ್ ಅವರು ತಮ್ಮ 17 ಸದಸ್ಯರ ಕಾರ್ಯಕಾರಿ ಸಮಿತಿಯೊಂದಿಗೆ ರಾಜೀನಾಮೆ ನೀಡಿದ್ದಾರೆ.
2016 ರಲ್ಲಿ ತಿರುವನಂತಪುರಂನ ಮ್ಯಾಸ್ಕಾಟ್ ಹೋಟೆಲ್‌ನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಿದ್ದಿಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
2017 ರ ನಟಿಯ ಮೇಲಿನ ಹಲ್ಲೆ ಪ್ರಕರಣದ ನಂತರ ಸ್ಥಾಪಿತವಾದ ನ್ಯಾಯಮೂರ್ತಿ ಹೇಮಾ ಸಮಿತಿಯು ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಶೋಷಣೆಯನ್ನು ಎತ್ತಿ ತೋರಿಸಿದೆ, ಇದು ಉನ್ನತ ಮಟ್ಟದ ನಟರು ಮತ್ತು ನಿರ್ದೇಶಕರ ವಿರುದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಲು ಕಾರಣವಾಯಿತು. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವ ಇತರ ನಟರಲ್ಲಿ ಜಯಸೂರ್ಯ, ಎಡವೇಲ ಬಾಬು ಮತ್ತು ಮಣಿಯನ್ಪಿಳ್ಳ ರಾಜು ಸೇರಿದ್ದಾರೆ.





