ಮಲಯಾಳಂನಲ್ಲಿ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಹೆಸರು ಮಾಡಿದ್ದ ಕೊಲ್ಲಂ ಸುಧಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಕೊಲ್ಲಂ ಸುಧಿಗೆ 39 ವರ್ಷ ವಯಸ್ಸಾಗಿತ್ತು. ಖ್ಯಾತ ಹ್ಯಾಸ ನಟನ ನಿಧನದಿಂದ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ.
ಇಂದು ಮುಂಜಾನೆ ಈ ಅಪಘಾತ ಸಂಭವಿಸಿದ್ದು ವಡಕರಾ ಎಂಬಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಕಾರು ತ್ರಿಶೂರ್ ಸಮೀಪದಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದಿದೆ.
ಟ್ರಕ್ಗೆ ಕಾರು ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಕೊಲ್ಲಂರನ್ನು ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.