ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಮಲ್ಲಿಕಾರ್ಜುನ ಖರ್ಗೆ(80) ಬುಧವಾರ ಪದಗ್ರಹಣ ಮಾಡಿದ್ದಾರೆ.
ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷೆ ಸೋನಿಯಾ ಗಾಂಧಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿ ಶುಭ ಹಾರೈಸಿದ್ದಾರೆ.
ಕಾಂಗ್ರೆಸ್ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ (CEC) ಮಧುಸೂದನ್ ಮಿಸ್ತ್ರಿ ಖರ್ಗೆಗೆ ಚುನಾವಣಾ ಪ್ರಮಾಣಪತ್ರವನ್ನು ಸಮಾರಂಭದಲ್ಲಿ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ.