ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಸೋಮವಾರ ಬೆಳಿಗ್ಗೆ ಆರಂಭಗೊಂಡಿದ್ದು, ಕಣದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಮುಖಂಡರು ಮತ ಚಲಾಯಿಸಿದ್ದಾರೆ.
25 ವರ್ಷಗಳ ನಂತರ ಇದೇ ಮೊದಲ ಬಾರಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ಆರಂಭವಾಗಿರುವ ಚುನಾವಣೆ ಸಂಜೆ ೪ ಗಂಟೆಯವರೆಗೆ ನಡೆಯಲಿದೆ.
ಪಕ್ಷದ 9100 ಪ್ರತಿನಿಧಿಗಳು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದುದ, ದೆಹಲಿ ಸೇರಿದಂತೆ ದೇಶದ 65 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಕ್ಟೋಬರ್ 19ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಕಣದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮತ ಚಲಾಯಿಸಿದರೆ, ಶಶಿ ತರೂರ್ ಕೇರಳದಲ್ಲಿ ಮತ ಚಲಾಯಿಸಿದರು. ಭಾರತ್ ಜೋಡೊ ಪಾದಯಾತ್ರೆ ಮುನ್ನಡೆಸುತ್ತಿರುವ ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ಮತ ಚಲಾಯಿಸಿದರು.