ಕೇಂದ್ರ ಕಳೆದ 6 ತಿಂಗಳು ಕೆಲಸ ಮಾಡಿಲ್ಲ, ಹಾಗಾಗಿಯೇ ಭಾರತ ಕರೋನ ಬಿಕ್ಕಟ್ಟಿಗೆ ಸಿಲುಕಿದೆ: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಮೋದಿ ಸರ್ಕಾರದ ವಿರುದ್ಧ ಗುಡುಗಿದ್ದು, ಕೇಂದ್ರ ಸರ್ಕಾರ ದೇಶವನ್ನು ಕರೋನದ ವಿನಾಶಕ್ಕೆ ದೂಡಿದೆ ಎಂದು ಆರೋಪಿಸಿದ್ದಾರೆ.

ಕಳೆದ 6 ತಿಂಗಳಲ್ಲಿ ಸಾಂಕ್ರಾಮಿಕ ರೋಗವನ್ನು ಎದುರಿಸಲು ಕೇಂದ್ರ ಸರ್ಕಾರ ಮತ್ತು ಸಚಿವರು ಯಾವುದೇ ಕೆಲಸ ಮಾಡಿಲ್ಲ. ಕರೋನ ಎದುರಿಸುವ ಸಮಯದಲ್ಲಿ ಅಧಿಕಾರ ಹಿಡಿಯಲು ಬಂಗಾಳಕ್ಕೆ ಬರುತ್ತಿದ್ದರು. ಹಾಗಾಗಿಯೇ ಇಂದು ಕೋವಿಡ್ ಬಿಕ್ಕಟ್ಟಿನಲ್ಲಿ ಮುಳುಗಿದ್ದಾರೆ ಎಂದು ಆರೋಪಿಸಿದ್ದಾರೆ.

77 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖ್ಯ ವಿರೋಧ ಪಕ್ಷವಾಗಿರುವ ಬಿಜೆಪಿ ಬಂಗಾಳದ ಹಿಂಸಾಚಾರದ ವಿರುದ್ಧ ಸ್ಪೀಕರ್ ಚುನಾವಣೆ ಪ್ರಕ್ರಿಯೆಯನ್ನು ಬಹಿಷ್ಕರಿಸಿತ್ತು. ಆದರು ಟಿಎಂಸಿ ಶಾಸಕ ಬಿಮನ್ ಬಂದೋಪಾಧ್ಯಾಯ ಸತತ ಮೂರನೇ ಬಾರಿಗೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕರೋನದ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ರಾಜ್ಯ ಆರೋಗ್ಯ ಸಚಿವಾಲಯದ ಪ್ರಕಾರ, ರಾಜ್ಯದಲ್ಲಿ ಶನಿವಾರ 127 ಜನರು ಕರೋನಾದಿಂದ ಸಾವನ್ನಪ್ಪಿದ್ದರೆ, 19436 ಹೊಸ ಪ್ರಕರಣಗಳು ವರದಿಯಾಗಿವೆ.

ಚುನಾವಣಾ ಆಯೋಗದಲ್ಲಿ ತುರ್ತು ಸುಧಾರಣೆ ಮಾಡಬೇಕು: ಮಮತಾ ಬ್ಯಾನರ್ಜಿ

ಚುನಾವಣಾ ಆಯೋಗದಲ್ಲಿ ತುರ್ತು ಸುಧಾರಣೆಗೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ, ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಮೊತ್ತವನ್ನು ಖರ್ಚು ಮಾಡಿದೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ.

“ಚುನಾವಣಾ ಆಯೋಗವನ್ನು ತಕ್ಷಣ ಸುಧಾರಿಸಬೇಕಾಗಿದೆ. ಕೇಂದ್ರ ಮತ್ತು ಇತರ ರಾಜ್ಯಗಳ ಮುಖಂಡರು ಸೇರಿದಂತೆ ಬಿಜೆಪಿ ತನ್ನ ಮುಖಂಡರಿಗಾಗಿ ಅನೇಕ ಹೋಟೆಲ್‌ಗಳನ್ನು ಕಾಯ್ದಿರಿಸಿತ್ತು. ವಿಮಾನ ಮತ್ತು ಗಯಾ ಹೋಟೆಲ್ಗೆ ಎಷ್ಟು ಹಣವನ್ನು ಖರ್ಚು ಮಾಡಲಾಗಿದೆ ಎಂದು ನನಗೆ ತಿಳಿದಿಲ್ಲ. ಆದರೆ ಇಲ್ಲಿ ಹಣವನ್ನು ನೀರಿನಂತೆ ಚೆಲ್ಲುತ್ತಿದ್ದಾರೆ. ಇದರ ಬದಲು ಜನರಿಗೆ ಲಸಿಕೆ ನೀಡಿದ್ದರೆ ರಾಜ್ಯ ಉತ್ತಮವಾಗುತ್ತಿತ್ತು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ವಿಧಾನಸಭಾ ಚುನಾವಣೆ ನಡೆದಿದ್ದು ಈ ಪೈಕಿ ತೃಣಮೂಲ ಕಾಂಗ್ರೆಸ್ 213 ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹೇರಿದರೆ ಅದೇ ಸಮಯದಲ್ಲಿ ಬಿಜೆಪಿ 77 ಸ್ಥಾನಗಳನ್ನು ಗೆದ್ದು ವಿರೋಧ ಪಕ್ಷದ ಸ್ಥಾನ ಗಿಟ್ಟಿಸಿಕೊಂಡಿತ್ತು. 294 ಕ್ಷೇತ್ರ ವಿಧಾನಸಭೆಯಲ್ಲಿ 2 ಕ್ಷೇತ್ರದ ಅಭ್ಯರ್ಥಿಗಳು ಸಾವನ್ನಪ್ಪಿದ್ದರಿಂದ ಅಲ್ಲಿ ಮತದಾನ ನಡೆಯಲಿಲ್ಲ ಎಂದು ತಿಳಿದುಬಂದಿದೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...