ಇತ್ತೀಚೆಗೆ ಉತ್ತರಾಖಂಡ್ ನ ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರದಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಭಾಷಣ ಮುಗಿಸಿದ ಕೆಲವೇ ನಿಮಿಷಗಳಲ್ಲಿ ಕೈಯಲ್ಲಿ ಚಾಕು ಹಿಡಿದ ವ್ಯಕ್ತಿಯೊಬ್ಬ “ಜೈ ಶ್ರೀ ರಾಮ್” ಎಂದು ವೇದಿಕೆ ಏರಿದ ಘಟನೆ ನಡೆದಿದೆ. ಕೂಡಲೇ ಎಚ್ಚೆತ್ತ ಯುವ ಕಾಂಗ್ರೆಸ್ ಕಾರ್ಯಕರ್ತರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಚಾಕು ಹಿಡಿದ ವೇದಿಕೆ ಏರಿದ ವ್ಯಕ್ತಿ ಮಾನಸಿಕವಾಗಿ ಅಸ್ಥಿರನಾಗಿದ್ದ ಎಂದು ಕಾಶಿಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರ ಮೋಹನ್ ಸಿಂಗ್ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಧಾನಿಯೊಂದಿಗೆ ಮಾತನಾಡಲು ಒತ್ತಾಯಿಸಿ ಉಧಮ್ ಸಿಂಗ್ ಪಟ್ಟಣದ ಗೋಪುರದ ಮೇಲೆ ಏರಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದರು.
ಗುರುವಾರ ಸಂಜೆ ರಾವತ್ ಭಾಷಣ ಮುಗಿಸಿ ವೇದಿಕೆಯಿಂದ ಕೆಳಗಿಳಿದ ಕೂಡಲೇ ಈ ಘಟನೆ ನಡೆದಿದೆ. 40ರ ಹರೆಯದ ಈ ವ್ಯಕ್ತಿಯ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.