
ಪುಣೆ:ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ನವೆಂಬರ್ 1 ರಂದು ರಾವೆಟ್ ಪ್ರದೇಶದಲ್ಲಿ ಸಂಭವಿಸಿದ ಅಪಘಾತದ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ರಾವೆಟ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸಂತ್ರಸ್ತ ಸೋಹಂ ಪಟೇಲ್ ದೀಪಾವಳಿಯ ಮುನ್ನಾದಿನದಂದು ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ವೇಗವಾಗಿ ಬಂದ ಕಾರು ಆತನ ಮೇಲೆ ಹರಿದಿದೆ” ಎಂದು ಹೇಳಿದರು.
#Pune Viral Video: Man Hit by Speeding Car While Bursting Firecrackers, Dies on the Spot https://t.co/GLEUG0IJeI pic.twitter.com/2kAPLBaYes
— Pune Pulse (@pulse_pune) November 3, 2024
ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿದ್ದು, ಅಪರಿಚಿತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ನಾವು ವಶಪಡಿಸಿಕೊಂಡಿದ್ದೇವೆ ಮತ್ತು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದು, ಪೊಲೀಸರು ಬಂಧಿಸಲು ವಿಫಲವಾದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.