ತುಮಕೂರು : ಲಂಚ ಪಡೆದಿದ್ದ ಮಹಿಳಾಧಿಕಾರಿಯನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ನೀಡಿದ ಘಟನೆಯು ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಉಪನೋಂದಣಿ ಕಚೇರಿಯಲ್ಲಿ ನಡೆದಿದೆ. ಪ್ರಥಮ ದರ್ಜೆ ಸಹಾಯಕಿ ಯಶೋಧಾರನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಿ ಮುದ್ರಾಂಕ ಇಲಾಖೆ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ.

ಗುಬ್ಬಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಯಶೋಧಾ ಹಿಂದೆ ಕರ್ತವ್ಯದ ಸಮಯದಲ್ಲಿ ಲಂಚದ ಹಣ ಪಡೆದುಕೊಂಡಿದ್ದರು. ಲಂಚ ಪಡೆದಿದ್ದ ವಿಡಿಯೋ ಸೋಶಿಯಲ್ ಜಾಲತಾಣದಲ್ಲಿ ಹರಿದಾಡಿತ್ತು.

ವಿಡಿಯೋವನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಲಂಚ ಪಡೆದಿದ್ದು ಸಾಬೀತಾದ ಕಡ್ಡಾಯ ನಿವೃತ್ತಿಗೆ ಆದೇಶ ಹೊರಡಿಸಲಾಗಿದೆ.