
ಮಂಡ್ಯ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರಾಳಿ ಗ್ರಾಮದಲ್ಲಿ ನಡೆದಿದೆ. ಅರವಿಂದ್(27) ಕೊಲೆಯಾದ ಯುವಕನಾಗಿದ್ದು, ವಿಜಯ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.
ಇಬ್ಬರು ನಾಗಮಂಗಲ ತಾಲ್ಲೂಕಿನ ತಿರುಮಲಾಪುರ ಗ್ರಾಮದವರು.ಕಲ್ಲು ಕೆಲಸ ಮಾಡಲೆಂದು ಜೊತೆಗೆ ಬಂದಿದ್ದರು.ಕುಮಾರ್ ಎಂಬುವವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

‘ಕುಡಿದ ಮತ್ತಿನಲ್ಲಿ ನಿನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿರುವುದಾಗಿ ಅರವಿಂದ್ ಹೇಳಿದ್ದಾನೆ. ಇದರಿಂದ ಕುಪಿತಗೊಂಡ ವಿಜಯ್ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಮತ್ತೊಬ್ಬ ಸ್ನೇಹಿತ ಏಳುಮಲೈ ಜತೆಗಿದ್ದ. ಘಟನೆ ಸಂಬಂಧ ಆರೋಪಿ ವಿಜಯ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.