ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್(Congress) ಅಭ್ಯರ್ಥಿ(Candidate) ಪರವಾಗಿ ಪ್ರಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ(BJP) ದೂರು ದಾಖಲಿಸಿದೆ.
ಮಂಡ್ಯ(Mandya)ದಲ್ಲಿ ಮಾ.10ರಂದು ಆಯೋಜಿಸಿದ್ದ ರಾಜ್ಯ ಸರ್ಕಾರದ ಗ್ಯಾರೆಂಟಿ ಸಮಾವೇಶದಲ್ಲಿ ಲೋಕಸಭಾ(LokaSaba) ಚುನಾವಣೆಯ ಕಾಂಗೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಆರೋಪದ ಮೇರೆಗೆ ಮಂಡ್ಯ(Mandya) ಬಿಜೆಪಿ ಕಾರ್ಯಕರ್ತರು ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಮಾ.10 ರಂದು ಮಂಡ್ಯದಲ್ಲಿ ಮಂಡ್ಯದ ವಿವಿ ಆವರಣದಲ್ಲಿ ನಡೆದ ಗ್ಯಾರೆಂಟಿ ಸಮಾವೇಶದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರವಾಗಿ ಪ್ರಚಾರ ನಡೆಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಇತರ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು.
ಹೀಗಾಗಿ ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿರೋದು ತಪ್ಪು, ಕಾಂಗ್ರೆಸ್ ಸಮಾವೇಶದ ಸಂಪೂರ್ಣ ವೆಚ್ಚವನ್ನ ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ವೆಚ್ಚಕ್ಕೆ ಸೇರಿಸಬೇಕು. ಬರಗಾಲದ ಸಂದರ್ಭದಲ್ಲಿ ಜನರ ತೆರಿಗೆ ಹಣವನ್ನ ಪಕ್ಷದ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ ತಕ್ಷಣವೇ ಕ್ರಮಕೈಗೊಳ್ಳಬೇಕು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಚುನಾವಣೆ ವೆಚ್ಚಕ್ಕೆ ಕಾರ್ಯಕ್ರಮದ ವೆಚ್ಚ ಸೇರಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತ ಸಿ.ಟಿ. ಮಂಜುನಾಥ್ ನೇತೃತ್ವದಲ್ಲಿ ಡಿಸಿಗೆ ಮನವಿ ಸಲ್ಲಿಸಲಾಗಿದೆ.
#Congress #LokaSaba #Mandya #StarChandru #BJPKarnataka #Siddaramaiah