ಮಂಡ್ಯ : ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಪರ್ವ ಜೋರಾಗಿದ್ದು ಈಗಾಗಲೇ ಘಟಾನುಘಟಿ ನಾಯಕರು ಪಕ್ಷದಿಂದ ಬಿ ಫಾರಂ ಪಡೆದು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಆದರೆ ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಅಭ್ಯರ್ಥಿಗೆ ಬಿ ಫಾರಂ ನೀಡದೇ ಸತಾಯಿಸುತ್ತಿದೆ.
ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ರವಿ ಗಣಿಗರಿಗೆ ಟಿಕೆಟ್ ನೀಡಿದೆ. ಆದರೆ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಇನ್ನೂ ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ. ಮೂಲಗಳ ಪ್ರಕಾರ ಜೆಡಿಎಸ್ನಿಂದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಯಿಂದ ಸಂಸದೆ ಸುಮಲತಾ ಸ್ಪರ್ಧಿಸುತ್ತಾರ ಎಂದು ಹೇಳಲಾಗ್ತಿದೆ.
ಸುಮಲತಾ ಹಾಗೂ ಕುಮಾರಸ್ವಾಮಿ ಎದುರು ತಮ್ಮ ಅಭ್ಯರ್ಥಿ ಡಮ್ಮಿ ಎನಿಸುವ ಸಾಧ್ಯತೆ ಇರೋದ್ರಿಂದ ಕಾಂಗ್ರೆಸ್ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ ಎನ್ನಲಾಗ್ತಿದೆ. ಒಂದು ವೇಳೆ ಬಿಜೆಪಿ ಹಾಗೂ ಜೆಡಿಎಸ್ ಅಂದುಕೊಂಡಂತೆ ಹೆಚ್ಡಿಕೆ ಮತ್ತು ಸುಮಲತಾ ಚುನಾವಣಾ ಅಖಾಡಕ್ಕೆ ಇಳಿದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಾಯಿಸಲು ನಿರ್ಧರಿಸಿದೆ.