5 ರೂಪಾಯಿ ಎಂದೇ ಖ್ಯಾತರಾಗಿರುವ ಮಂಡ್ಯದ ಶಂಕರಗೌಡರಿಗೆ ಹೃದಯಾಘಾತ ಸಂಭವಿಸಿದ ಹಿನ್ನೆಲೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಎಂದು ಪೋಸ್ಟ್ ಹಾಕುವುದರ ಮೂಲಕ ಅಭಿಮಾನಿಗಳು ಮತ್ತು ಅವರ ಕುಟುಂಬಸ್ಥರಲ್ಲಿ ಆತಂಕ ಮೂಡಿಸುತ್ತಿದ್ದಾರೆ.
ಸಧ್ಯ ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಶಂಕರಗೌಡರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ವಿಡಿಯೋ ವನ್ನು ಪತ್ನಿ ರುಕ್ಮಿಣಿ ಅಪ್ಲೋಡ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
![](https://pratidhvani.com/wp-content/uploads/2022/05/IMG_20220529_113323.jpg)
ಶಂಕರಗೌಡರ ಆರೋಗ್ಯದಲ್ಲಿ ಏರುಪೇರು ಆಗಿಲ್ಲ. ಮೈಸೂರಿನಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಶಸ್ತ್ರ ಚಿಕಿತ್ಸೆ ಅನಿವಾರ್ಯವಾಗಿದೆ. ಶಂಕರೇಗೌಡರು ಚೆನ್ನಾಗಿಯೇ ಮಾತನಾಡುತ್ತಿದ್ದಾರೆ. ಎಲ್ಲರನ್ನೂ ಗುರುತಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗೇನೂ ಇಲ್ಲ. ಜನರು, ಅಭಿಮಾನಿಗಳು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಪತ್ನಿ ರುಕ್ಮಿಣಿ ಅವರು ವೈದ್ಯರೊಂದಿಗೆ ಶಂಕರೇಗೌಡರು ಮಾತನಾಡುತ್ತಿರುವ ವಿಡಿಯೋ ಅಪ್ಲೋಡ್ ಮಾಡಿದ್ದು, ಸುಳ್ಳು ವದಂತಿಗಳಿಗೆ ತೆರೆ ಎಳೆದಿದ್ದಾರೆ.