ಮಂಡ್ಯ(mandya) ರಣಕಣದಿಂದ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಹೆಚ್ ಡಿ ಕುಮಾರಸ್ವಾಮಿ(HD Kumaraswamy) ಇಂದು ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ . ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS yediyurappa) ಮತ್ತು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Promod Sawant) ಕೂಡ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ತಮ್ಮ ಜೊತೆ ಇರಲಿದ್ದಾರೆ ಎಂಬುದನ್ನು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದ ಹೆಚ್ ಡಿ ಕುಮಾರಸ್ವಾಮಿ , ಕಾಂಗ್ರೆಸ್ (congress) ನಾಯಕರ ಹೇಳಿಕೆಗಳ ವಿರುದ್ಧ ಕಿಡಿಕಾರಿದ್ದಾರೆ. ಜೆಡಿಎಸ್ (jds) ರಾಜ್ಯದಲ್ಲಿ ಸಂಪೂರ್ಣವಾಗಿ ನೆಲಕಚ್ಚಿದೆ , ಲೋಕಸಭೆ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿ ಇರುವುದಿಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ ಮಂಡ್ಯದಲ್ಲಿ ಜೆಡಿಎಸ್ – ಕಾಂಗ್ರೆಸ್ ನಡುವೆ ಇರುವ ಮತಗಳ ಅಂತರ ಕೇವಲ ಮೂರು ಸಾವಿರ ಮಾತ್ರ . ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಅವರ ಎಲ್ಲ ಟೀಕೆಗಳಿಗೆ ಉತ್ತರ ಕೊಡುತ್ತೀವಿ ಅಂತ ಎಚ್ಡಿಕೆ ಹೇಳಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ನ ಸಂಪೂರ್ಣವಾಗಿ ಮುಗಿಸಬೇಕು ಅನ್ನೋ ಗುರಿಯನ್ನು ಇಟ್ಟುಕೊಂಡು ಕಾಂಗ್ರೆಸ್ ಹೊರಟಿದೆ . ಆದರೆ ಕಾಂಗ್ರೆಸ್ ಭಾವಿಸಿದಷ್ಟು ಆ ಗುರಿ ತಲುಪೋದು ಸುಲಭವಲ್ಲ . ಜೆಡಿಎಸ್ ಇನ್ನು ಶಕ್ತಿಯುತವಾಗಿದೆ ಎಂಬುದನ್ನು ಈ ಬಾರಿ ಮತದಾರರೇ ಸಾಬೀತು ಪಡಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

