ಮಂಗಳೂರು ನಗರ ಪಾಲಿಕೆ ಮೇಯರ್ ಹಾಗU ಉಪಮೇಯರ್ ಚುನಾವಣೆ ಶುಕ್ರವಾರ ನಡೆಯಲಿದ್ದು ಬಿಜೆಪಿಯಿಂದ ಮೇಯರ್ ಅಭ್ಯರ್ಥಿಯಾಗಿ ಜಯಾನಂದರನ್ನು ಪಕ್ಷ ಘೋಷಿಸಿದೆ.
ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿರುವುದರಿಂದ 23ನೇ ಭಾರಿಗೆ ಪಾಲಿಕೆಯ ಮೇಯರ್ ಸ್ಥಾನ ಬಿಜೆಪಿ ತೆಕ್ಕೆಗೆ ಬರುವುದು ಬಹುತೇಕ ಖಚಿತವಾಗಿದೆ.
ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಪೂರ್ಣಿಮಾರನ್ನು ಕಣಕ್ಕಿಳಿಸಲು ಸಜ್ಜಾಗಿದೆ. ಇನ್ನು ಕಾಂಗ್ರೆಸ್ನಿಂದ ಮೇಯರ್ ಅಭ್ಯರ್ಥಿಯಾಗಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಕಣಕ್ಕಿಳಿದಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಜೀನತ್ ಸ್ಪರ್ಧಿಸುತ್ತಿದ್ದಾರೆ.
ಪಾಲಿಕೆಯ ಆವರಣದಲ್ಲಿ ನಡೆಯುವ ಮೇಯರ್ ಉಪಮೇಯರ್ ಆಯ್ಕೆ ಪ್ರಕ್ರಿಯೆಯನ್ನು ಪ್ರಾದೇಶಿಕ ಆಯುಕ್ತರು ನಡೆಸಿಕೊಡಲಿದ್ದಾರೆ.