ಮಣಿಪುರ : ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಲು ಮಣಿಪುರದ ಇಂಫಾಲಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಇಬೋಬಿ ಅವರು ಕೂಡ ರಾಹುಲ್ ಗಾಂಧಿಗೆ ಭರ್ಜರಿ ಸ್ವಾಗತ ಕೋರಿದರು.
ಬಳಿಕ ಭಾರತ್ ಜೋಡೋ ನ್ಯಾಯ ಯಾತ್ರೆ ಕುರಿತು ನಾಯಕರು ಚರ್ಚೆಯಲ್ಲಿ ತೊಡಗಿದರು. ಅಲ್ಲದೆ ಒಬ್ಬರಿಗೊಬ್ಬರು ಕುಸಲೋಪರಿಯನ್ನು ವಿಚಾರಿಸಿದರು. ಇದೇ ವೇಳೆ ಗೃಹ ಸಚಿವ ಜಿ.ಪರಮೇಶ್ವರ್ ಸಚಿವ ಭೈರತಿ ಸುರೇಶ್ ಸೇರಿದಂತೆ ಮಣಿಪುರದ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು