• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮನಮೋಹನ್ ಸಿಂಗ್ – ಭಾರತ ಕಂಡ ಪ್ರಾಮಾಣಿಕ ಪ್ರಧಾನಿ

ಪ್ರತಿಧ್ವನಿ by ಪ್ರತಿಧ್ವನಿ
December 27, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಮನಮೋಹನ್ ಸಿಂಗ್ – ಭಾರತ ಕಂಡ ಪ್ರಾಮಾಣಿಕ ಪ್ರಧಾನಿ
Share on WhatsAppShare on FacebookShare on Telegram

ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ

ADVERTISEMENT

ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸಿದ್ದನ್ನು ಸ್ಮರಿಸಿದ ಸಿಎಂ

ಬೆಳಗಾವಿ , ಡಿಸೆಂಬರ್ 27: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

Manamohansingh : ಮೋದಿ ಗೆ ದೇಶದ ಆರ್ಥಿಕ ಅಭಿವೃದ್ಧಿ ಬಗ್ಗೆ ಬುದ್ಧಿ  ಹೇಳಿದ್ದ ಮನಮೋಹನಸಿಂಗ್ #pratidhvani

ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್ ರ ಹೆಜ್ಜೆಗುರುತು

2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ ಎಂದರು.

ಅವರ ನಿಧನದಿಂದ ದೇಶಕ್ಕೆ ದೊಡ್ಡ ನಷ್ಟ

ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಹಾಗೂ ಸ್ಪೂರ್ತಿ ನೀಡುತ್ತಿದೆ. ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಶ್ರೀಯುತರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನು ಅಗಲಿದ್ದು, ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಆಹಾರ ಭದ್ರತೆ ಕಾಯ್ದೆಯಡಿ ಅನ್ನಭಾಗ್ಯ ಯೋಜನೆ

ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದ ಬಡತನವಿದ್ದಿದ್ದರಿಂದ, ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಂತರ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಐದು ಕೆಜಿ ಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟನಿವಾರಣೆಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದರು.

Siddaramaiah: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊಡುಗೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..! #manamohansingh

ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸೆ

ಮನಮೋಹನ್ ಸಿಂಗ್ ರವರೊಂದಿಗಿನ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಧಾನಿಯಾಗಿದ್ದಾಗ ಭೇಟಿ ಮಾಡಿದ್ದೂ, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿ, ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದರು.

Tags: dr. manmohan singhformer prime minister manmohanhonest manmohan singhhonest prime minister of indiaIndiaManmohan Singhmanmohan singh (politician)manmohan singh in parliamentmanmohan singh in rajya sabhamanmohan singh interviewmanmohan singh speechmost honest politician in indiaPrime Ministerprime minister manmohan singhprime minister of indiaprime minsiter manmohan singhthe accidental prime minister
Previous Post

ಡಿಎಂಕೆ ಅಧಿಕಾರದಿಂದ ಕೆಳಗೆ ಇಳಿಯುವ ತನಕ ಪಾದರಕ್ಷೆ ಧರಿಸಲ್ಲ ಎಂದು ಪ್ರತಿಜ್ಞೆ..!

Next Post

ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು: ಸಿ.ಎಂ.ಸಿದ್ದರಾಮಯ್ಯ.

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು: ಸಿ.ಎಂ.ಸಿದ್ದರಾಮಯ್ಯ.

ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು: ಸಿ.ಎಂ.ಸಿದ್ದರಾಮಯ್ಯ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada